7:53 PM Thursday28 - January 2021
ಬ್ರೇಕಿಂಗ್ ನ್ಯೂಸ್
ಬೆಳಗಾವಿ ಅಧಿವೇಶನ ನಡೆಸದೆ ಉತ್ತರ ಕರ್ನಾಟಕದ ನಿರ್ಲಕ್ಷ್ಯ: ರಾಜ್ಯಪಾಲರ ಭಾಷಣದ ವೇಳೆ ಕಾಂಗ್ರೆಸ್… ಇಬ್ಬರು ಪುತ್ರಿಯನ್ನು ಬೆತ್ತಲೆಗೊಳಿಸಿ ಬಡಿದು ಸಾಯಿಸಿದ ಪಾಪಿ ದಂಪತಿ ಶಿವ- ಪಾರ್ವತಿಯರಂತೆ!  ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ

ಇತ್ತೀಚಿನ ಸುದ್ದಿ

ಸಖರಾಯಪಟ್ಟಣ ಫಾರ್ಮ್ ಹೌಸ್ ನಲ್ಲಿ ಧರ್ಮೇಗೌಡರಿಗೆ ಅಂತಿಮ ವಿದಾಯ: ಮುಗಿಲು ಮುಟ್ಟಿದ ಆಕ್ರಂದನ

December 29, 2020, 8:57 PM

ಕಡೂರು(reporterkarnataka news):ವಿಧಾನ ಪರಿಷತ್ ಉಪಸಭಾಪತಿ ಎಸ್. ಎಲ್ ಧರ್ಮೇಗೌಡ ಅವರ ಅಂತ್ಯಕ್ರಿಯೆ ಸಖರಾಯಪಟ್ಟಣದ ತೋಟದ ಮನೆಯಲ್ಲಿ ಮಂಗಳವಾರ ನಡೆಯಿತು. ಧರ್ಮೇಗೌಡರ ಕುಟುಂಬಸ್ಥರ ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತ್ತು.

ಇದಕ್ಕೆ ಮುನ್ನ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸಖರಾಯಪಟ್ಟಣದ ಕಾಲೇಜು ಆವರಣದಲ್ಲಿ ಇಡಲಾಯಿತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ. ಎಚ್. ಡಿ ಕುಮಾರಸ್ವಾಮಿ, ಕಾನೂನು ಸಚಿವ ಮಾಧುಸ್ವಾಮಿ, ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ. ಶಾಸಕರಾದ ಸಿ.ಟಿ.ರವಿ, ಕುಮಾರಸ್ವಾಮಿ, ಸುರೇಶ್ ಹಾಗೂ ಬೆಳ್ಳಿ ಪ್ರಕಾಶ್ ಮುಂತಾದವರು ಪುಷ್ಪಗುಚ್ಛ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು.

ಪೊಲೀಸ್ ಇಲಾಖೆಯಿಂದ ಸರ್ಕಾರಿ ಗೌರ ವಂದನೆ ಸಲ್ಲಿಸಲಾಯಿತು. ನಂತರ ಸಖರಾಯಪಟ್ಟಣದ ಕಾಲೇಜು ಆವರಣದಿಂದ ಫಾರಂ ಹೌಸ್ ಗೆ  ಪಾರ್ಥಿವ ಶರೀರವನ್ನು

ಕೊಂಡೋಗಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು