ಇತ್ತೀಚಿನ ಸುದ್ದಿ
ಸಾಲದ ಮೇಲಿನ ಬಡ್ಡಿ ವಸೂಲಿ: ಸ್ಪಷ್ಟ ನಿಲುವಿಗೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
August 26, 2020, 7:07 AM

ನವದೆಹಲಿ(reporterkarnataka news): ಕೊರೋನಾದ ಹಿನ್ನೆಲೆಯಲ್ಲಿ ಆರ್ ಬಿ ಐ ಘೋಷಿಸಿರುವ ನಿರ್ಬಂಧ ಅವಧಿಯಲ್ಲಿ ಸಾಲದ ಮೇಲಿನ ಬಡ್ಡಿ ವಸೂಲಿ ಮತ್ತು ಬಡ್ಡಿಯ ಮೇಲೆ ಬಡ್ಡಿ ವಸೂಲಿ ಕುರಿತಂತೆ ಸ್ಪಷ್ಟ ನಿಲುವು ತಿಳಿಸುವಂತೆ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಆರ್ ಬಿ ಐ ಘೋಷಿಸಿರುವ ನಿರ್ಬಂಧ ಅವಧಿ ಆಗಸ್ಟ್ 31ಕ್ಕೆ ಕೊನೆಗೊಳ್ಳಲಿದೆ. ಈಗಾಗಲೇ ಬ್ಯಾಂಕ್ ಗಳು ಸಾಲ ವಸೂಲಾತಿ ಪ್ರಕ್ರಿಯೆ ಆರಂಭಿಸಿವೆ. ನಿರ್ಬಂಧ ಅವಧಿಯ ವೈಯಕ್ತಿಕ ಸಾಲದ ಮರು ಹೊಂದಾಣಿಕೆ ಮಾಡಿಕೊಂಡಿವೆ.
ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸಪ್ಟೆಂಬರ್ 1ಕ್ಕೆ ಮುಂದೂಡಿದೆ.