ಇತ್ತೀಚಿನ ಸುದ್ದಿ
ಸಂಪುಟ ವಿಸ್ತರಣೆ: ಭೇಟಿಗೆ ಸಿಗದ ಅಮಿತ್ ಶಾ,ನಡ್ಡಾ ಜತೆ ಚರ್ಚಿಸಿ ಬರಿಗೈಲಿ ಬಿಎಸ್ ವೈ ವಾಪಸ್
November 18, 2020, 11:25 PM

ನವದೆಹಲಿ(reporterkarnataka news): ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಬುಧವಾರ ದಿಲ್ಲಿಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಜತೆ ಮಾತುಕತೆ ನಡೆಸಿದ್ದಾರೆ. ಆದರೆ ಗೃಹ ಸಚಿವ ಅಮಿತ್ ಶಾ ಭೇಟಿಯಾಗಲು ಯಡಿಯೂರಪ್ಪ ಅವರಿಗೆ ಸಾಧ್ಯವಾಗಲಿಲ್ಲ. ಸದ್ಯ ಅವರು ಬರಿಗೈಲಿ ಬೆಂಗಳೂರಿಗೆ ವಾಪಸಾಗಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಯಡಿಯೂರಪ್ಪ ಅವರು
ಬಿಜೆಪಿ ಅಧ್ಯಕ್ಷ ನಡ್ಡಾ ಅವರ ಜತೆ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಯಡಿಯೂರಪ್ಪ ಅವರು ತನ್ನ ಬೇಡಿಕೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಮುಂದಿಟ್ಟಿದ್ದಾರೆ. ಪ್ರತಿಯಾಗಿ ನಡ್ಡಾ ಅವರು 3-4 ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿಯವರು ಬರಿಗೈಲಿ ವಾಪಸಾಗಿದ್ದಾರೆ. ಸಂಪುಟ ವಿಸ್ತರಣೆ ಏನಿದ್ದರೂ 3-4 ದಿನಗಳ ಬಳಿಕವಷ್ಟೇ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.