9:34 AM Thursday3 - December 2020
ಬ್ರೇಕಿಂಗ್ ನ್ಯೂಸ್
ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ  ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ ಬುಕ್… ಮಂಗಳೂರು ಏರ್ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರಿಡುವಂತೆ ಆಗ್ರಹಿಸಿ ಡಿ.7ರಂದು ಬೈಕ್ ಜಾಥಾ ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್

ಇತ್ತೀಚಿನ ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ  ಡ್ರಗ್ಸ್ ಜಾಲ: ನಟಿ ರಾಗಿಣಿ ಬಂಧನ

September 4, 2020, 1:46 PM

ಬೆಂಗಳೂರು(reporterkarnataka news): ಚಂದನವನದ ಮಾದಕ ದ್ರವ್ಯ  ಸಂಪರ್ಕದ ಕುರಿತು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವ ಚಲನಚಿತ್ರ ನಟಿ ರಾಗಿಣಿ ದ್ವಿವೇದಿ ವಿರುದ್ಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದು, 

ಅವರ ಬಂಧಿಸಲಾಗಿದೆ. ಒಂದನೇ ಎಸಿಎಂ ಎಂ ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಸಲಾಗುವುದು.

ವೀಡಿಯೊ ಕಾನ್ಪರೆನ್ಸ್ ಮೂಲಕ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು. 

ರಾಗಿಣಿ ವಿರುದ್ಧ ಸಿಸಿಬಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಈಗಾಗಲೇ ರಾಹುಲ್ ಹಾಗೂ ರವಿಶಂಕರ್ ಅವರನ್ನು ಬಂಧಿಸಿದ್ದಾರೆ.

ತನಿಖೆ ನಡೆಸುತ್ತಿರುವ ಸಿಸಿಬಿ  ಅಧಿಕಾರಿಗಳು ಇದೀಗ ನಟಿ ರಾಗಿಣಿಯನ್ನು ವಿಚಾರಣೆಗೆ ಗುರಿಪಡಿಸಿದ್ದಾರೆ. ಮಾದಕ ದ್ರವ್ಯ ಜಾಲದಲ್ಲಿ ರಾಗಿಣಿಯ ಪಾತ್ರ ಮತ್ತು ಅವರ ಆಪ್ತ ಸ್ನೇಹಿತರ ಚಲನವಲನದ ಬಗ್ಗೆ ಪ್ರಶ್ನಿಸಲಾಗಿದೆ.

ಸುಮಾರು 40 ಪ್ರಶ್ನೆಗಳನ್ನು ತನಿಖಾ ಅಧಿಕಾರಿಗಳು ಕೇಳಿದ್ದಾರೆ.

2018ರಲ್ಲಿ ಆರೋಪಿ ಪ್ರತೀಕ್ ಶೆಟ್ಟಿ ನೀಡಿದ್ದ  ಹೇಳಿಕೆ ಯನ್ನು ಕೂಡ ತನಿಖಾ ಅಧಿಕಾರಿಗಳು ಪರಿಗಣಿಸಿದ್ದಾರೆ. ಅದೇ ರೀತಿ ಇದೀಗ ಸಿಸಿಬಿ ವಶದಲ್ಲಿರುವ ರವಿ ಶಂಕರ್ ನೀಡಿದ ಮಾಹಿತಿ ಆಧಾರದಲ್ಲಿ ಪ್ರಶ್ನೆ ಸಿದ್ದಪಡಿಸಲಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು