ಇತ್ತೀಚಿನ ಸುದ್ದಿ
ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಜನವರಿಗೆ ಮುಂದೂಡಿಕೆ
December 4, 2020, 1:17 PM

ನವದೆಹಲಿ(reporterkarnataka news): ಜಾಮೀನು ಕೋರಿ ನಟಿ ರಾಗಿಣಿ ಸಲ್ಲಿಸಿರುವ ಅರ್ಜಿ ವಿಚಾರಣೆ ಯನ್ನು ಸರ್ವೋಚ್ಚ ನ್ಯಾಯಾಲಯ ಜನವರಿಗೆ ಮುಂದೂಡಿದೆ. ಹೈಕೋರ್ಟ್ ಜಾಮೀನು ಅರ್ಜಿ ತಳ್ಳಿಹಾಕಿರುವ ಹಿನ್ನೆಲೆಯಲ್ಲಿ ರಾಗಿಣಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು.
ಇದರಿಂದಾಗಿ ನಟಿ ರಾಗಿಣಿ ಇನ್ನಷ್ಟು ದಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲ ಕಳೆಯಬೇಕಾಗಿದೆ. ಇದೇ ವೇಳೆ ಮತ್ತೊಬ್ಬ ನಟಿ ಸಂಜನಾ ಜಾಮೀನು ಕೋರಿ ಮತ್ತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಮುಂದುವರಿದಿದೆ.
ಕಳೆದ ಎರಡು ತಿಂಗಳಿನಿಂದ ರಾಗಿಣಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.