ಇತ್ತೀಚಿನ ಸುದ್ದಿ
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ: ನಟಿ ಸಂಜನಾಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು
December 11, 2020, 5:02 PM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ನಂಟಿನ ಆರೋಪದ ಹಿನ್ನೆಲೆಯಲ್ಲಿ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಸಂಜನಾ ಅವರು ಅನಾರೋಗ್ಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಇದನ್ನು ಪರಿಗಣಿಸಿ ನ್ಯಾಯಾಲಯ ಜಾಮೀನು ನೀಡಿದೆ.
ಈ ಮೊದಲು ಸಂಜನಾ ಅವರ ಆರೋಗ್ಯ ತಪಾಸಣೆ ನಡೆಸಿ ವರದಿ ಸಲ್ಲಿಸುವಂತೆ ವಾಣಿ ವಿಲಾಸ ಆಸ್ಪತ್ರೆಯ ವೈದ್ಯರಿಗೆ ಹೈಕೋರ್ಟ್ ಸೂಚನೆ ನೀಡಿತ್ತು.
ಇನ್ನೊಬ್ಬ ಆರೋಪಿ ರಾಗಿಣಿ, ಜಾಮೀನು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಜನವರಿಯಲ್ಲಿ ನಡೆಯಲಿದೆ.