ಇತ್ತೀಚಿನ ಸುದ್ದಿ
ಸರಕಾರಿ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ದುರಂತ:10 ಕಂದಮ್ಮಗಳ ಜೀವಂತ ದಹನ
January 9, 2021, 9:15 AM

ಮುಂಬೈ(reporterkarnataka news): ಮಹಾರಾಷ್ಟ್ರದ ಭಂಡಾರದಲ್ಲಿ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 10 ಮಕ್ಕಳು ಬೆಂಕಿಯ ಕೆನ್ನಾಲೆಗೆ ಸಿಲುಕಿ ಮೃತಪಟ್ಟಿದ್ದಾರೆ.
ಮಧ್ಯರಾತ್ರಿ ಎರಡು ಗಂಟೆ ಹೊತ್ತಿಗೆ ಈ ದುರಂತ ಸಂಭವಿಸಿದೆ. ಏಳು ಮಕ್ಕಳನ್ನು ರಕ್ಷಿಸಲಾಗಿದೆ. ಸಾವನ್ನಪ್ಪಿದ ಮಕ್ಕಳು ನವಜಾತ ಶಿಶುವಿನಿಂದ ಹಿಡಿದು ಮೂರು ವರ್ಷದ ಒಳಗಿನ ಮಕ್ಕಳು ಎಂದು ವರದಿಯಾಗಿದೆ.
ಇದು ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಅಗ್ನಿ ದುರಂತಗಳಲ್ಲಿ ಒಂದಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.