6:29 AM Tuesday9 - March 2021
ಬ್ರೇಕಿಂಗ್ ನ್ಯೂಸ್
ಸಾಗರಮಾಲಾ ಯೋಜನೆಯ ಕೋಸ್ಟಲ್ ಬರ್ತ್  ರದ್ದುಪಡಿಸಲು ಒತ್ತಾಯಿಸಿ ಬೆಂಗರೆಯಲ್ಲಿ ಪ್ರತಿಭಟನೆ ಮೂಡುಬಿದರೆ: ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಂದ ಎರಡು ದಿನಗಳ ಶೈಕ್ಷಣಿಕ ಪ್ರವಾಸ, ಚಾರಣ ಮಹಿಳಾ ದಿನಾಚರಣೆ ದಿನದಂದೇ ಶಾಕಿಂಗ್ ನ್ಯೂಸ್: ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ 50 ಟನ್ ಬೂದುಗುಂಬಳ ಬೆಳೆಸಿದ ತೀರ್ಥಹಳ್ಳಿ ರೈತ: ಖರೀದಿಗೆ ಸಗಟು ವರ್ತಕರಿಲ್ಲದೆ ಸೋತ!… ಮಂಗಳೂರಿನ ಸಿಮ್ರಾನ್ ಕೋಚಿಂಗ್ ಸೆಂಟರ್ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ ರಾಜ್ಯ ಬಜೆಟ್ : ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ. 45 ಲಕ್ಷ… ಮಹಿಳೆ ಮತ್ತು ನಾಯಕತ್ವ ಕ್ರೈಸ್ತ ಸಮುದಾಯ ವಿರುದ್ಧ ಸಂಸದ ಪ್ರತಾಪ ಸಿಂಹ ವಿವಾದಿತ ಹೇಳಿಕೆ: ಕಾಂಗ್ರೆಸ್ ಪ್ರತಿಭಟನೆ ಇಂದು ರಾಜ್ಯ ಬಜೆಟ್: ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಡನೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಥ್ರೋಬಾಲ್ ಪಂದ್ಯಾಟ

ಇತ್ತೀಚಿನ ಸುದ್ದಿ

ನ.5 ರಂದು ಸರಕಾರಿ ಸಾರಿಗೆ ಬಸ್ ನೌಕರರ ಬೃಹತ್ ಪ್ರತಿಭಟನೆ

November 2, 2020, 12:55 PM

ಬೆಂಗಳೂರು (reporter Karnataka news)

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ನೌಕರರ ಪ್ರತಿಭಟನೆಯಿಂದಾಗಿ ಬಸ್ ಸಂಚಾರಕ್ಕೆ ತೊಂದರೆ ಉಂಟಾಗಬಹುದು.

ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ನೇತೃತ್ವದಲ್ಲಿ ಸ್ವಾತಂತ್ರ ಉದ್ಯಾನದಲ್ಲಿ ನವೆಂಬರ್ 5ರಂದು ಪ್ರತಿಭಟನೆ ನಡೆಸಲಾಗುತ್ತದೆ. ಕೋವಿಡ್‌ನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಬೇಕು ಎನ್ನುವುದು ಪ್ರಮುಖ ಬೇಡಿಕೆಯಾಗಿದೆ

ಲಾಕ್ ಡೌನ್ ಬಳಿಕ ಸಾರಿಗೆ ನೌಕರರು ಕರ್ತವ್ಯಕ್ಕೆ ವಾಪಸ್ ಆಗಿದ್ದಾರೆ ಆದರೆ ಪರಿಪೂರ್ಣ ಪ್ರಮಾಣದ ಕೆಲಸ ಅವರಿಗೆ ಸಿಗುತ್ತಿಲ್ಲ. ಒಂದು ವೇಳೆ ಕೆಲಸ ಬೇಕಾದರೆ ಘಟಕದ ಅಧಿಕಾರಿಗಳಿಗೆ ಲಂಚ ನೀಡಬೇಕು ಎಂದು ನೌಕರರು ಆರೋಪಿಸಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ವೇತನ ನೀಡುವುದಕ್ಕೆ ನೌಕರರ ರಜೆ ಕಡಿತಗೊಳಿಸಲಾಗಿದೆ. ಹಲವು ಭತ್ಯೆಗಳನ್ನು ರದ್ದು ಮಾಡಲಾಗಿದೆ ಎಂದು ನೌಕರರು ಆರೋಪ ಮಾಡಿದ್ದಾರೆ.

ಕೋವಿಡ್‌ನಿಂದಾಗಿ ಸಾರಿಗೆ ನೌಕರರು ಮೃತಪಟ್ಟರೆ 30 ಲಕ್ಷ ರೂ. ನೀಡುವುದಾಗಿ ಈ ಹಿಂದೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಘೋಷಣೆ ಮಾಡಿದ್ದರು. ಇದುವರೆಗೆ ಅದನ್ನು ನೀಡಲು ಕ್ರಮ ಕೈಗೊಂಡಿಲ್ಲ ಎಂದು ನೌಕರರು ದೂರಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಕರೆ ನೀಡಿರುವ ಪ್ರತಿಭಟನೆಯಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಇದರಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು