7:15 AM Thursday22 - January 2026
ಬ್ರೇಕಿಂಗ್ ನ್ಯೂಸ್
ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ…

ಇತ್ತೀಚಿನ ಸುದ್ದಿ

ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಮಧ್ಯಂತರ ವರದಿ ಸಲ್ಲಿಕೆ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

03/02/2022, 08:46

ಬೆಂಗಳೂರು(reporterkarnataka.com): ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.

ಅವರು ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣಗಳ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಚಿಸಿರುವ ಸಮಿತಿ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.

ರಾಜ್ಯದ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಹಾಗೂ ನಿರೀಕ್ಷೆಗಳನ್ನು ಹಂಚಿಕೊಂಡ ಮುಖ್ಯಮಂತ್ರಿಗಳು, ಈ ಸಂಸ್ಥೆಗಳ ಸಾಮರ್ಥ್ಯ ಗುರುತಿಸಿ, ಅವುಗಳ ದಕ್ಷ ಬಳಕೆಗೆ ಮಾರ್ಗೋಪಾಯಗಳನ್ನು ಶಿಫಾರಸು ಮಾಡುವಂತೆ ತಿಳಿಸಿದರು.

ಸಾರಿಗೆ ಸಂಸ್ಥೆಗಳ ಆಸ್ತಿಗಳಿಂದ ಆದಾಯೋತ್ಪನ್ನ, ಸಂಸ್ಥೆಯ ವರ್ಕ್ ಶಾಪ್ ಗಳ ಸದ್ಬಳಕೆ, ಮಾನವ ಸಂಪನ್ಮೂಲದ ದಕ್ಷ ಬಳಕೆ, ಸಂಸ್ಥೆಗಳ ಸೇವೆಯಲ್ಲಿ ಸುಧಾರಣೆ, ತಂತ್ರಜ್ಞಾನದ ಬಳಕೆ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ತಾವು ಕೈಗೊಂಡ ಕ್ರಮಗಳ ಕುರಿತು ಎಂ.ಆರ್. ಶ್ರೀನಿವಾಸಮೂರ್ತಿ ಮಾಹಿತಿ ನೀಡಿದರು.

ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ, ಕೆ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು