7:57 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ಸಾರಿಗೆ ಸಿಬ್ಬಂದಿ ಮುಷ್ಕರ: ಹೊರ ಊರಿಗೆ ತೆರಳಲು ಪ್ರಯಾಣಿಕರ ಪರದಾಟ

December 12, 2020, 9:31 AM

ಶ್ರೀನಿವಾಸಪುರ(reporterkarnataka news): ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಆಗ್ರಹಿಸಿ ಮುಷ್ಕರ ನಡೆಸಿದ ಪರಿಣಾಮವಾಗಿ ಪ್ರಯಾಣಿಕರು ಹೊರ ಊರುಗಳಿಗೆ ಹೋಗಲು ಪರದಾಡಿದರು.

  ಬೇರೆ ಬೇರೆ ಸ್ಥಳಗಳಿಗೆ ಹೋಗಲು ಬಸ್‌ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರು ಗಂಟೆಗಟ್ಟಲೆ ಕಾದರೂ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಸೇವೆ ಪ್ರಾರಂಭವಾಗಲಿಲ್ಲ. ಬಸ್‌ ಚಾಲಕರು ಹಾಗೂ ನಿರ್ವಾಹಕರು ಬಸ್‌ಗಳಿಂದ ದೂರ ಉಳಿದರು. ರಸ್ತೆ ಸಾರಿಗೆ ಸಂಸ್ಥೆ ಸೇವೆಯನ್ನೇ ನೆಚ್ಚಿಕೊಂಡಿರುವ ಗ್ರಾಮೀಣ ಪ್ರದೇಶದ  ಪ್ರಯಾಣಿಕರು ಹೆಚ್ಚಿನ ತೊಂದರೆ ಅನುಭವಿಸಿದರು.

  ದೂರದ ಗ್ರಾಮಗಳಿಗೆ ಆಟೋ ಬಾಡಿಗೆ ಕೊಡಲಾಗದೆ, ನಡೆಯಲು ಸಾಧ್ಯವಾಗದೆ ಪರಿತಪಿಸಿದ ಪ್ರಯಾಣಿಕರು, ಹತ್ತಿರದ ಗ್ರಾಮಗಳತ್ತ ಕಾಲ್ನಡಿಗೆಯಲ್ಲೇ ಹೊರಟರು. ದೂರದ ಸ್ಥಳಗಳಿಗೆ ಹೋಗುವ ಪ್ರಯಾಣಿಕರು, ಬೆರಳೆಣಿಕೆಯಷ್ಟು ಖಾಸಗಿ ಬಸ್‌ಗಳು ಹಾಗೂ ಸರಕು ಸಾಗಣೆ ಟೆಂಪೋಗಳನ್ನು ಅವಲಂಬಿಸಬೇಕಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು