7:23 PM Thursday21 - January 2021
ಬ್ರೇಕಿಂಗ್ ನ್ಯೂಸ್
ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ…

ಇತ್ತೀಚಿನ ಸುದ್ದಿ

ಸಸಿಹಿತ್ಲು; ಸಮುದ್ರಕ್ಕಿಳಿದ 9 ಮಂದಿಯಲ್ಲಿ ಒಬ್ಬ ಸಾವು, ಇನ್ನೋರ್ವ ನಾಪತ್ತೆ, 7 ಮಂದಿ ಬಚಾವ್

January 10, 2021, 10:49 PM

ಸುರತ್ಕಲ್ (reporterkarnataka news): 

ಸಸಿಹಿತ್ಲು ಮುಂಡ ಬೀಚ್ ನಲ್ಲಿ ಭಾನುವಾರ ಸಮುದ್ರ ಸ್ನಾನ ಮಾಡುತ್ತಿದ್ದ 9 ಮಂದಿ ಯುವಕರ ತಂಡ ನೀರಿನ ಸೆಳೆತಕ್ಕೆ ಸಿಕ್ಕಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇನ್ನೊಬ್ಬರು ನಾಪತ್ತೆಯಾಗಿದ್ದಾರೆ
.

ಮೃತಪಟ್ಟವರನ್ನು ಸಾಣೂರಿನ ಸುಂದರ್ (45) ಎಂದು ಗುರುತಿಸಲಾಗಿದೆ.

ತೋಕೂರು ಬಳಿಯ ಮೂಡುಮನೆಯೊಂದರಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಶುಕ್ರವಾರ ಆಗಮಿಸಿದ್ದವರು. ತಿರುಗಾಡಲೆಂದು ಸಸಿಹಿತ್ಲು ಬೀಚ್‌ಗೆ ತೆರಳಿದ್ದರು ಎನ್ನಲಾಗಿದೆ. ಒಟ್ಟು 11 ಮಂದಿ ಬೀಚ್‌ಗೆ ತೆರಳಿದ್ದರು ಎನ್ನಲಾಗಿದ್ದು ಅದರಲ್ಲಿ 9 ಮಂದಿ ನೀರಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ಸೆಳೆತ ಜೋರಾಗಿದ್ದ ಪರಿಣಾಮ 9 ಮಂದಿ ನೀರುಪಾಲಾಗಿದ್ದಾರೆ ಆದರೆ ಕೂಡಲೇ ಸ್ಥಳೀಯ ಮೀನುಗಾರರು 7 ಮಂದಿಯನ್ನು ರಕ್ಷಣೆ ಮಾಡಿದ್ದು ಓರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ, ಇನ್ನೋರ್ವ ನೀರು ಪಾಲಾಗಿದ್ದು ಹುಡುಕಾಟ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು