ಇತ್ತೀಚಿನ ಸುದ್ದಿ
ಶಾಲೆ ಪುನರಾರಂಭ: ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ
December 19, 2020, 10:15 AM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಶಾಲೆ ಆರಂಭ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ವಿವಿಧ ಇಲಾಖೆಗಳ ಮುಖ್ಯಸ್ಥರ ಜತೆ ಚರ್ಚೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಜನವರಿ ಮೊದಲ ವಾರದಲ್ಲಿ ಶಾಲೆ ಪುನರಾರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಇಂದು ಸಭೆಯಲ್ಲಿ ವ್ಯಕ್ತವಾಗುವ ಅಭಿಪ್ರಾಯ ಆಧರಿಸಿ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ.