ಇತ್ತೀಚಿನ ಸುದ್ದಿ
ಶ್ರಿ ವಿದ್ಯಾ ಚೌಡೇಶ್ವರಿಗೆ ಪೂಜೆ ಸಲ್ಲಿಸಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್
October 17, 2020, 2:03 PM

ತುಮಕೂರು(reporterkarnataka news): ನವರಾತ್ರಿಯ ಮೊದಲ ದಿನವಾದ ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿಶೇಷ ಪೂಜೆ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದ ಹಂಗರ ಹಳ್ಳಿಯಲ್ಲಿರುವ ಶ್ರೀ ವಿದ್ಯಾ ಚೌಡೇಶ್ವರಿ ಮಹಾ ಸಂಸ್ಥಾನ ಮಠಕ್ಕೆ ಪತ್ನಿ ಸಮೇತ ಭೇಟಿ ನೀಡಿದ್ದಾರೆ. ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಮೊದಲ ಬಾರಿ ಡಿ ಕೆ ಶಿವಕುಮಾರ್ ಚುನಾವಣೆ ಎದುರಿಸುತ್ತಿದ್ದಾರೆ. ಜತೆಗೆ ಆದಾಯ ಮತ್ತು ಇತರ ತೆರಿಗೆ ಇಲಾಖೆಗಳ ದಾಳಿಗೆ ಕೂಡ ತುತ್ತಾಗಿದ್ದಾರೆ