1:29 AM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಐಪಿಎಲ್ ಬೆಟ್ಟಿಂಗ್: ಶಿರಸಿಯಲ್ಲಿ ಇಬ್ಬರ ಬಂಧನ, ನಗದು, ಮೊಬೈಲ್ ಫೋನ್ ವಶ

October 8, 2020, 10:31 PM

ಕಾರವಾರ(reporterkarnataka news):

ಐಪಿಎಲ್ ಕ್ರಿಕೆಟ್ ಜ್ವರ ಏರುತ್ತಿದ್ದಂತೆ ಬೆಟ್ಟಿಂಗ್ ಕೂಡ ಸದ್ದಿಲ್ಲದೆ ಜೋರಾಗಿಯೇ ನಡೆಯುತ್ತಿದೆ. ಬೆಟ್ಟಿಂಗ್ ಸಂಬಂಧಿಸಿದಂದೆ ಶಿರಸಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. 

ಶಿರಸಿಯ ಮರಾಠಿಕೊಪ್ಪ ಬಸ್ ನಿಲ್ದಾಣದ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಮರಾಠಿಕೊಪ್ಪದ  ಚಂದ್ರಶೇಖರ ಗಣಪತಿ ಪಟಗಾರ ಮತ್ತು ಕಿರಣ ಗಣಪತಿ ಪಟಗಾರ ಬಂಧಿತರು.   ಆರೋಪಿತರಿಂದ 11,295 ರೂ.  ಹಾಗೂ ಜೂಜಾಟಕ್ಕೆ ಬಳಸಿಕೊಂಡಿದ್ದ 2 ಮೊಬೈಲ್ ಗಳನ್ನು ಮಾರುಕಟ್ಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು