11:19 AM Monday17 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಸ್ಮಾರ್ಟ್ ಸಿಟಿ ‘ಕ್ಲೀನ್ ಬೀಚ್’ ಜಾಗೃತಿಗಾಗಿ ಓಟ ಹಾಗೂ ಸ್ವಚ್ಛತಾ ಕಾರ್ಯಕ್ರಮ

27/12/2021, 13:10

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕ್ರೆಡೈ ಮಂಗಳೂರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ  ರಾಷ್ಟ್ರೀಯ ಸೇವಾ ಯೋಜನೆ  ಆಶ್ರಯದಲ್ಲಿ ಸ್ಮಾರ್ಟ್ ಸಿಟಿ ‘ಕ್ಲೀನ್ ಬೀಚ್’ ಜಾಗೃತಿಗಾಗಿ ಓಟ ಹಾಗೂ ಸ್ವಚ್ಚತಾ ಕಾರ್ಯಕ್ರಮ ಡಿ.26ರಂದು ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ನಡೆಯಿತು. 


ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮವನ್ನು ಸ್ವಚ್ಛತೆ ಮಾಡುವ ಮೂಲಕ ಉದ್ಘಾಟಿಸಿ,  ಸ್ವಚ್ಛತಾ ಓಟಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ  ಮಾತನಾಡಿದ ಅವರು, ಕರಾವಳಿ ಜಿಲ್ಲೆಯ ಸೌಂದರ್ಯ, ನಮ್ಮ ಪ್ರವಾಸೋದ್ಯಮದ ಕನ್ನಡಿ ಎಂದರೆ ಅದು ನಮ್ಮ ಬೀಚ್‌ಗಳು. ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರು ಸ್ವಚ್ಛವಾಗಿರುವುದರ ಜೊತೆಗೆ ಕಡಲ ತೀರವನ್ನು ಸ್ವಚ್ಛವಾಗಿ ಇರಿಸಬೇಕಾದ ಅಗತ್ಯವಿದೆ ಎಂದು ಹೇಳಿದರು. 


ಸ್ವಚ್ಛತೆಯ ಕುರಿತ ಜಾಗೃತಿಗಾಗಿ ಇಲಾಖೆಗಳು ಮತ್ತು ಮಾಧ್ಯಮಗಳು ಒಟ್ಟಾಗಿ ಕೆಲಸ‌ ಮಾಡಬೇಕಾಗಿದೆ ಎಂದವರು ಅಭಿಪ್ರಾಯಪಟ್ಟರು.


ಮುಖ್ಯ ಅತಿಥಿಯಾಗಿದ್ದ ಶಾಸಕ ಡಾ.ಭರತ್ ಶೆಟ್ಟಿ ಮಾತನಾಡಿ, ನಮ್ಮ ಪರಿಸರ ಮತ್ತು ಬೀಚ್‌ಗಳನ್ನು ಸ್ವಚ್ಛವಾಗಿ ಸಂರಕ್ಷಿಸಬೇಕಾದ ಜವಾಬ್ದಾರಿ ಇದೆ ಎಂದು ನುಡಿದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಪಂಚಾಯತ್ ಸಿಇಒ ಡಾ.ಕುಮಾರ್, ನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಕ್ರೆಡೈ ಮಂಗಳೂರು ಇದರ ಅಧ್ಯಕ್ಷ ಪುಷ್ಪರಾಜ ಜೈನ್,  ಕೆಐಒಸಿಎಲ್ ಜನರಲ್ ಮ್ಯಾನೇಜರ್ ರಾಮಕೃಷ್ಣ ರಾವ್  ಎಚ್, ಸೀನಿಯರ್ ಮ್ಯಾನೇಜರ್ ಮುರುಗೇಶ್, ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ. ಎ., ಬೈಕಂಪಾಡಿ ಮೊಗವೀರ ಮಹಾಸಭಾದ ಅಧ್ಯಕ್ಷ ವಸಂತ ಅಮೀನ್, ಯತೀಶ್ ಬೈಕಂಪಾಡಿ, ಯಂಗ್ ಸ್ಟಾರ್ ಪಣಂಬೂರು ಅಧ್ಯಕ್ಷ ನವೀನ್ ಸಾಲಿಯಾನ, ಸಂತೋಷ್ ಗುರಿಕಾರ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.



ಬಳಿಕ ಬೀಚ್ ಸ್ವಚ್ಚತಾ ಜಾಗೃತಿ ಓಟ ಮತ್ತು ಸ್ವಚ್ಛತಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾಯೋಜನೆಯ ಸ್ವಯಂ ಸೇವಕರು ಪಾಲ್ಗೊಂಡು ಸ್ವಚ್ಛತಾ ಕಾರ್ಯ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು