ಇತ್ತೀಚಿನ ಸುದ್ದಿ
ಎಸ್ಪಿಬಿ ಆರೋಗ್ಯದಲ್ಲಿ ಚೇತರಿಕೆ, ಅಭಿಮಾನಿಗಳಿಗೆ ಸಂದೇಶ ಕಳಿಸಿದ ಹಿರಿಯ ಗಾಯಕ
August 15, 2020, 12:18 PM

ಚೆನ್ನೈ(reporterkarnataka news)
ಕೊರೋನಾ ಸೋಂಕಿಗೆ ಪಾಸಿಟಿವ್ ಬಂದಿರುವ ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಆಸ್ಪತ್ರೆಯಿಂದಲೇ ಅಭಿಮಾನಿಗಳಿಗೆ ಸಂದೇಶ ಕಳಿಸಿರುವ ಅವರು ಆರೋಗ್ಯ ಸುಧಾರಿಸಿದ್ದು, ಈ ಬಗ್ಗೆ ಅಭಿಮಾನಿಗಳಿಗೆ ಸಂದೇಶವನ್ನು ಕಳಿಸಿದ್ದಾರೆ.
ಕೊರೋನಾ ಸೋಂಕಿಗೆ ಗುರಿಯಾಗಿರುವ ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಶುಕ್ರವಾರ ಮಧ್ಯಾಹ್ನ ವರದಿಯಾಗಿತ್ತು. ಈ ಬಗ್ಗೆ ಚೆನ್ನೈ ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ತಿಳಿಸಿತ್ತು.
ಹಿರಿಯ ಗಾಯಕರ ಆರೋಗ್ಯ ಸ್ಥಿರವಾಗಿದೆ. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಎಸ್ಪಿಬಿ ಆಪ್ತ ಶ್ರೀನಿವಾಸ್ ತಿಳಿಸಿದ್ದಾರೆ.
ಎರಡು ಮೂರು ದಿನಗಳಿಂದ ಸ್ವಲ್ಪ ಆರೋಗ್ಯದಲ್ಲಿ ಸಮಸ್ಯೆ ಇತ್ತು. ಜ್ವರ ಹಾಗೂ ಶೀತ ಇತ್ತು. ಹಾಗಾಗಿ ಆಸ್ಪತ್ರೆಗೆ ಬಂದು ಚೆಕ್ ಮಾಡಿಸಿದೆ.
ಪರೀಕ್ಷೆ ಮಾಡಿಸಿದಾಗ ಕೊರೋನಾ ಸೋಂಕು ಇರುವುದು ಗೊತ್ತಾಗಿದೆ ಹಾಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆನೆ ಎಂದು ಎಸ್ಪಿಬಿ ವಿಡಿಯೋ ಮೂಲಕ ತಮಗೆ ಕೊರೋನಾ ಸೋಂಕು ದೃಢಪಟ್ಟಿರುವುದನ್ನು ತಿಳಿಸಿದ್ದರು.
74 ವರ್ಷದ ಗಾಯಕ ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಭಾರತದ ಬಹುತೇಕ ಎಲ್ಲ ಭಾಷೆಗಳ ಸಿನಿಮಾ ರಂಗದಲ್ಲಿಯೂ ಪರಿಚಯ. ಕನ್ನಡದಲ್ಲಿಯೇ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ.