8:28 AM Saturday28 - November 2020
ಬ್ರೇಕಿಂಗ್ ನ್ಯೂಸ್
ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ

ಇತ್ತೀಚಿನ ಸುದ್ದಿ

ಖ್ಯಾತ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ

September 4, 2020, 3:45 AM

ಚೆನ್ನೈ(reporterkarnataka news): ಇಲ್ಲಿನ ಎಂಜಿಎಂ ಹೆಲ್ತ್ ಕೇರ್ ಸೆಂಟರ್ ನ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಶೀಘ್ರದಲ್ಲೇ ಅವರು ಬಿಡುಗಡೆಯಾಗಲಿದ್ದಾರೆ ಎಂದು ವರದಿಯಾಗಿದೆ.

ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ಸೋಂಕು ತಗುಲಿ ಆಗಸ್ಟ್ 5 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ವೆಂಟಿಲೇಟರ್, ಎಕ್ಮೋ ಮಷೀನ್ ಸೇರಿ ಜೀವ ರಕ್ಷ ಸಾಧನಗಳ ನೆರವಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು.

ತಜ್ಞ ವೈದ್ಯರ ತಂಡದಿಂದ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ನಿರಂತರ ಚಿಕಿತ್ಸೆಯಿಂದ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅವರು ಈ ವಾರಾಂತ್ಯದಲ್ಲಿ ಅಥವಾ ಮುಂದಿನ ವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಮತ್ತೊಂದೆಡೆ ಕೋಟ್ಯಂತರ ಅಭಿಮಾನಿಗಳು ಅವರ ಚೇತರಿಕೆಗೆ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು