8:55 AM Wednesday27 - January 2021
ಬ್ರೇಕಿಂಗ್ ನ್ಯೂಸ್
ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಹಳೆ ವಿದ್ಯಾರ್ಥಿನಿಯರ ಸಂಘದಿಂದ ಪ್ರತಿಭಾ ಪುರಸ್ಕಾರ 

November 29, 2020, 6:08 PM

ಶ್ರೀನಿವಾಸಪುರ(reporterkarnataka news):
ವಿದ್ಯಾರ್ಥಿನಿಯರು ಅವಿರತ ಪ್ರಯತ್ನದಿಂದ ನಿಗದಿತ ಗುರಿ ತಲುಪಬೇಕು ಎಂದು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಆರ್‌.ಮಾಧವಿ ಹೇಳಿದರು.

  ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿನಿಯರ ಸಂಘದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಮಾತನಾಡಿ,  ವಿದ್ಯಾರ್ಥಿನಿಯರು ಓದುವ ಅವಧಿಯಲ್ಲಿ ಸುಖಕ್ಕೆ ಹಾತೊರೆಯದೆ ಶ್ರಮವಹಿಸಿ ಅಭ್ಯಾಸ ಮಾಡಬೇಕು ಎಂದು ಹೇಳಿದರು.

  ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಎನ್‌.ಶ್ರೀಧರ್‌ ಮಾತನಾಡಿ, ಕಾಲೇಜಿನ ಹಳೆ ವಿದ್ಯಾರ್ಥಿನಿಯರು, ಶಾಲೆಯ ವಿದ್ಯಾರ್ಥಿನಿಯರ ಸಾಧನೆಯನ್ನು ಗುರುತಿಸಿ ಪುರಸ್ಕರಿಸುತ್ತಿರುವುದು ಪ್ರಶಂಸನೀಯ ಎಂದು ಹೇಳಿದರು.

  ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿನಿಯರಿಗೆ ಡಾ. ಚಂದ್ರಕಲಾ ನಗದು ಬಹುಮಾನ ನೀಡಿದರು.

  ಹಳೆಯ ವಿದ್ಯಾರ್ಥಿನಿಯರಾದ ಎಂಜಿನಿಯರ್‌ ಸುನಂದ, ಬ್ಯಾಂಕ್ ವ್ಯವಸ್ಥಾಪಕಿ ಮಾಧವಿ, ಪ್ರೌಢ ಶಾಲಾ ಶಿಕ್ಷಕಿಯರಾದ ಜಯಲಕ್ಷ್ಮಮ್ಮ, ಕೆ.ವಿ.ಶಾರದಮ್ಮ, ರಾಜೇಶ್ವರಿ, ಯಾಸ್ಮಿನ್‌ ತಾಜ್‌, ಆದಿಲಕ್ಷ್ಮಮ್ಮ, ಪದ್ಮಜ, ಆಶಾ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು