5:28 PM Friday30 - January 2026
ಬ್ರೇಕಿಂಗ್ ನ್ಯೂಸ್
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಹಾಲಿನ ಕ್ಯಾನು ವಿತರಣೆ; ಕರುಗಳ ಪ್ರದರ್ಶನ, ಹಸಿರು ಮೇವು ಕ್ಷೇತ್ರೋತ್ಸವ 

13/03/2022, 10:49

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ

info.reporterkarnataka@gmail.com

ರೈತರು ಸರ್ಕಾರ ಹಾಗೂ ಕೋಚಿಮುಲ್ ನೀಡುವ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು. ಆರ್ಥಿಕ ಸ್ಥಿತಿ ಉತ್ತಮಪಡಿಸಿಕೊಳ್ಳಬೆಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಶ್ರೀನಿವಾಸಪುರ ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಕೋಚಿಮುಲ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಹಾಲಿನ ಕ್ಯಾನು ವಿತರಣೆ, ಕರುಗಳ ಪ್ರದರ್ಶನ ಹಾಗೂ ಹಸಿರು ಮೇವು ಕ್ಷೇತ್ರೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ದಿನವೊಂದಕ್ಕೆ ೫೦ ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದರಿಗೆ ತಿಂಗಳಿಗೆ ರೂ.೪.೮೦ ಕೋಟಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಕೃಷಿಕ ಕುಟುಂಬಗಳ ಆರ್ಥಿಕಾಭಿವೃದ್ಧಿಯಲ್ಲಿ ಹಾಲು ಮುಖ್ಯ ಪಾತ್ರವಹಿಸಿದೆ. ಹಸಿರು ಹುಲ್ಲಿನ ಸಮಸ್ಯೆ ನಿವಾರಣೆಗೆ ತಾಲ್ಲೂಕಿನ ಕಾಡುಗಳಲ್ಲಿ ಕ್ಷೀರೋತ್ಪಾದಕರು ಹುಲ್ಲು ಬೆಳೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ಶಿಬಿರ ಕಚೇರಿ ವ್ಯವಸ್ಥಾಪಕ ಆರ್.ಜಿ.ನರಸಿಂಹಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ನಿರ್ದೇಶಕ ಎಸ್.ಜಿ.ಜಗದೀಶ್ ಎನ್.ಜಿ.ಬೇಟಪ್ಪ, ಎಸ್.ವಿ.ಸುಧಾಕರ್, ಮುನಿವೆಂಕಟಪ್ಪ, ಅಯ್ಯಪ್ಪ, ಕೆ.ಕೆ.ಮಂಜು, ಶ್ರೀನಿವಾಸ ಗೌಡ, ಜಿ.ಎಂ.ಶ್ರೀರಾಮರೆಡ್ಡಿ, ಹರೀಶ್ ನಾರಾಯಣಸ್ವಾಮಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು