10:23 PM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಧರ್ಮಸ್ಥಳದ ವತಿಯಿಂದ ಕಾಂಪೋಸ್ಟ್‌ ತಯಾರಿಕಾ ತರಬೇತಿ ಶಿಬಿರ

December 27, 2020, 10:20 AM

ಶ್ರೀನಿವಾಸಪುರ(reporterkarnataka news): ಮನೆಗಳಲ್ಲಿ ಬೀಳುವ ಹಸಿ ಕಸದಿಂದ ಕಾಂಪೋಸ್ಟ್‌ ಗೊಬ್ಬರ ತಯಾರಿಸಿ ಬಳಸಿಕೊಳ್ಳಬೇಕು ಎಂದು ಪುರಸಭೆಯ ಸ್ವಚ್ಛತಾ ರಾಯಭಾರಿ ಟಿ.ಎಸ್‌.ಮಾಯಾ ಬಾಲಚಂದ್ರ ಹೇಳಿದರು.

  ಪಟ್ಟಣದ ವೆಂಕಟೇಶ್ವರ ಬಡಾವಣೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಕಾಂಪೋಸ್ಟ್‌ ತಯಾರಿಕಾ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿ, ಪುರಸಭಾ ನಿಯಮದಂತೆ ಪ್ರತಿ ಮನೆಯಲ್ಲೂ ಹಸಿ ಕಸ ಹಾಗೂ ಒಣ ಕಸ ಎಂದು ವಿಭಾಗಿಸಲಾಗುತ್ತದೆ. ಹಸಿ ಕಸವನ್ನು ಕಡಿಮೆ ಖರ್ಚಿನಲ್ಲಿ, ಸರಳ ವಿಧಾನದ ಮೂಲಕ ಕಾಂಪೋಸ್ಟ್‌ ಗೊಬ್ಬರ ತಯಾಸಿ ಹಿತ್ತಲ ತೋಟದ ಗಿಡಗಳಿಗೆ ಬಳಸಿಕೊಳ್ಳಬಹುದಾಗಿದೆ. ಬೇಡವಾದಲ್ಲಿ ಮಾರಾಟಮಾಡಿ ಹಣ ಗಳಿಸಬಹುದಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಟ್ಟಣದ ನಾಗರಿಕರಿಗೆ ಪೈಪ್‌ ಬಳಸಿ ಕಾಂಪೋಸ್ಟ್‌ ತಯಾರಿಸುವ ಬಗ್ಗೆ ಪ್ರಾತ್ಯಕ್ಷತೆ ಏರ್ಪಡಿಸಲಾಗಿತ್ತು. 

ತಾಲ್ಲೂಕು ಪಂಚಾಯಿತಿ ಸದಸ್ಯೆ ನಾಗವೇಣಿ ರೆಡ್ಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಘಟಕದ ಯೋಜನಾಧಿಕಾರಿ ಸುರೇಶ್‌ ಗೌಡ, ಕೃಷಿ ಅಧಿಕಾರಿ ಅರುಣ್‌ ಕುಮಾರ್‌, ಮೇಲ್ವಿಚಾರಕಿ ಜ್ಯೋತಿ, ಸೇವಾ ಪ್ರತಿನಿಧಿಗಳಾದ ಜಗದಾಂಬ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು