9:35 PM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ದಿಲ್ಲಿ ತಂಡದಿಂದ ಶ್ರೀನಿವಾಸಪುರ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

November 4, 2020, 10:32 PM

ಶ್ರೀನಿವಾಸಪುರ(reporterkarnataka news): ಕೇಂದ್ರ ಅಧ್ಯಯನ ತಂಡ ಬುಧವಾರ ತಾಲ್ಲೂಕಿಗೆ ಭೇಟಿ ನೀಡಿ  ವಿವಿಧ ಯೋಜನೆಗಳಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗರಿಗಳ ಪ್ರಗತಿ ಪರಿಶೀಲನೆ ನಡೆಸಿತು.

ದೆಹಲಿಯಿಂದ ಆಗಮಿಸಿದ್ದ ಅಧ್ಯಯನ ತಂಡದ ನೇತೃತ್ವವನ್ನು ಮಹಾರಾಷ್ಟ್ರದ ಗಾಯಕ್‌ವಾಡ್‌ ವಹಿಸಿದ್ದರು. ವಿನಾಯಕ ಘಾಡೆ ತಂಡದ ಉಪ ಮುಖ್ಯಸ್ಥರಾಗಿದ್ದರು.

ತಂಡದ ಸದಸ್ಯರು ಎರಡೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ ಕೃಷಿ, ಸ್ವಚ್ಛ ಭಾರತ್‌ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ, ಕಾಮಗಾರಿಗಳ ನಿರ್ವಹಣೆ ಕುರಿತು ತೃಪ್ತಿ ವ್ಯಕ್ತಪಡಿಸಿದರು.

      ಸ್ವಚ್ಛ ಭಾರತ್ ಮಿಷನ್‌ ಸಂಯೋಜಕ ವಿಜಯ ಕುಮಾರ್‌, ರಾಷ್ಟ್ರೀಯ ಗ್ರಾಮೀಣ ನೈರ್ಮಲ್ಯ ಯೋಜನಾಧಿಕಾರಿ, ಸುಂದರೇಶ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್‌.ರವಿಕುಮಾರ್‌, ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್, ಸಹಾಯಕ ನಿರ್ದೇಶಕ ಕೆ.ರಾಮಪ್ಪ, ಸುರೇಶ್‌ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು