5:49 AM Tuesday9 - March 2021
ಬ್ರೇಕಿಂಗ್ ನ್ಯೂಸ್
ಸಾಗರಮಾಲಾ ಯೋಜನೆಯ ಕೋಸ್ಟಲ್ ಬರ್ತ್  ರದ್ದುಪಡಿಸಲು ಒತ್ತಾಯಿಸಿ ಬೆಂಗರೆಯಲ್ಲಿ ಪ್ರತಿಭಟನೆ ಮೂಡುಬಿದರೆ: ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಂದ ಎರಡು ದಿನಗಳ ಶೈಕ್ಷಣಿಕ ಪ್ರವಾಸ, ಚಾರಣ ಮಹಿಳಾ ದಿನಾಚರಣೆ ದಿನದಂದೇ ಶಾಕಿಂಗ್ ನ್ಯೂಸ್: ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ 50 ಟನ್ ಬೂದುಗುಂಬಳ ಬೆಳೆಸಿದ ತೀರ್ಥಹಳ್ಳಿ ರೈತ: ಖರೀದಿಗೆ ಸಗಟು ವರ್ತಕರಿಲ್ಲದೆ ಸೋತ!… ಮಂಗಳೂರಿನ ಸಿಮ್ರಾನ್ ಕೋಚಿಂಗ್ ಸೆಂಟರ್ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ ರಾಜ್ಯ ಬಜೆಟ್ : ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ. 45 ಲಕ್ಷ… ಮಹಿಳೆ ಮತ್ತು ನಾಯಕತ್ವ ಕ್ರೈಸ್ತ ಸಮುದಾಯ ವಿರುದ್ಧ ಸಂಸದ ಪ್ರತಾಪ ಸಿಂಹ ವಿವಾದಿತ ಹೇಳಿಕೆ: ಕಾಂಗ್ರೆಸ್ ಪ್ರತಿಭಟನೆ ಇಂದು ರಾಜ್ಯ ಬಜೆಟ್: ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಡನೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಥ್ರೋಬಾಲ್ ಪಂದ್ಯಾಟ

ಇತ್ತೀಚಿನ ಸುದ್ದಿ

ಶ್ರೀನಿವಾಸಪುರದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

November 1, 2020, 8:59 PM

ಶ್ರೀನಿವಾಸಪುರ(reporterkarnataka news):  ನಾಗರಿಕರು ತಮ್ಮ ದಿನ ನಿತ್ಯದ ವ್ಯವಹಾರದಲ್ಲಿ ಕನ್ನಡ ಭಾಷೆ ಬಳಸುವುದರ ಮೂಲಕ, ಭಾಷಾ ಬೆಳವಣಿಗೆಗೆ ಸಹಕರಿಸಬೇಕು ಎಂದು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಹೇಳಿದರು.

  ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

 ದೇಶದಲ್ಲಿ ಕನ್ನಡ ಭಾಷೆಗೆ ತನ್ನದೇ ಅಧ ಹಿರಿಮೆ ಇದೆ. ಹೆಚ್ಚಿನ ಸಂಖ್ಯೆಯ ಜ್ಞಾನಪೀಠ ಪ್ರಶಸ್ತಿಗಳು ಕನ್ನಡ ಸಾಹಿತ್ಯಕ್ಕೆ ಬಂದಿರುವುದು ಭಾಷೆಯ ಉತ್ಕೃಷ್ಟತೆಯ ಸಂಕೇತವಾಗಿದೆ ಎಂದು ಅಭಿಪ್ರಾಯಪಟ್ಟರು.

  ಕೊರೊನಾ ಸಂಕಷ್ಟದ ನಡುವೆ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಆದರೆ ಕನ್ನಡದ ಹಿರಿಮೆ ಗರಿಮೆಗೆ ಯಾವುದೇ ಕುಂದು ಬಂದಿಲ್ಲ. ಎಲ್ಲರೂ ಕನ್ನಡ ಸಾಹಿತ್ಯ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಸಾಹಿತ್ಯದ ವಿವಿಧ ಪ್ರಕಾರಗಳ ಸಾರವನ್ನು ಆಸ್ವಾದಿಸಬೇಕು ಎಂದು ಹೇಳಿದರು.

  ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌ ಕರ್ನಾಟಕದ ಏಕೀಕರಣದ ಬಗ್ಗೆ ವಿವಿರವಾಗಿ ಮಾತನಾಡಿದರು.

  ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಬಾಬು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು