ಇತ್ತೀಚಿನ ಸುದ್ದಿ
ಮೌಲ್ಯಾಮಾಪನ ಈಗಾಗಲೇ ಪೂರ್ಣ: ರಾಜ್ಯ ಎಸ್ಸೆಸ್ಸೆಲ್ಸಿ ಫಲಿತಾಂಶ ನಾಳೆ ಪ್ರಕಟ ?
August 7, 2020, 4:39 AM

ಬೆಂಗಳೂರು(reporterkarnataka news):
2019–20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಆಗಸ್ಟ್ 8ರಂದು ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇತ್ತೀಚೆಗೆ ಮಾಧ್ಯಮಗಳ ಜತೆ ಮಾತನಾಡಿ, ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಈಗಾಗಲೇ ಪೂರ್ಣಗೊಂಡಿದ್ದು, ಆ.8ರೊಳಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದ್ದರು.
ಈ ಮಧ್ಯೆ ಆ.7ರಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಗುರುವಾರ ಸುದ್ದಿಯಾಗಿತ್ತು ಹರಿದಾಡಿತ್ತು.
ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಸಚಿವರು ಪ್ರತಿಕ್ರಿಯೆ ಕೂಡ ನೀಡಿದ್ದು, ದಿನಾಂಕ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿಸಿದ್ದಾರೆ