6:43 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಕಮಿಷನರೇಟ್ ವ್ಯಾಪ್ತಿ ಹೊರತುಪಡಿಸಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ಪಡೆಯುವುದು ಹೇಗೆ?

October 19, 2020, 8:42 PM

ಮಂಗಳೂರು (reporterkarnataka news): ಮಂಗಳೂರು ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ  ಸ್ಪೋಟಕ ಕಾಯಿದೆ ಮತ್ತು ನಿಯಮದಡಿ ಮೈದಾನದಲ್ಲಿ, ತೆರೆದ ಪ್ರದೇಶದಲ್ಲಿ ಹಬ್ಬಗಳ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ ಅರ್ಜಿಗಳನ್ನು ಈಗಾಗಲೇ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸ್ವೀಕರಿಸಲಾಗುತ್ತಿದ್ದು, ಪರವಾನಿಗೆ ಪಡೆಯ ಬಯಸುವವರು ಅರ್ಜಿಯನ್ನು ನವೆಂಬರ್ 2 ರೊಳಗೆ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು. 

ನಿಗದಿತ ನಮೂನೆ ಎಇ-5ರಲ್ಲಿ ಅರ್ಜಿ ಸಲ್ಲಿಸಬೇಕು, ಅರ್ಜಿಯೊಂದಿಗೆ ನಾಲ್ಕು ಪ್ರತಿ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ ನೀಲ ನಕ್ಷೆ, ಎರಡು ಪ್ರತಿ ಅರ್ಜಿದಾರರ ಭಾವಚಿತ್ರ, ನಾಲ್ಕು ಪ್ರತಿ ಪ್ರಸ್ತಾವಿತ ಜಮೀನಿನ ಪಹಣಿ, ಸರ್ಕಾರಿ ಜಮೀನು ಅಲ್ಲದೇ ಇದ್ದಲ್ಲಿ ಜಮೀನಿನ ಮಾಲಕರ ಒಪ್ಪಿಗೆ ಪತ್ರ, ಜಮೀನು ಯಾವ ಇಲಾಖೆಯ ಸುಪರ್ದಿಯಲ್ಲಿದೆಯೋ ಆ ಇಲಾಖೆಯ ನಿರಾಕ್ಷೇಪಣಾ ಪತ್ರವನ್ನು ಸಲ್ಲಿಸಬೇಕು.

ಸಂಬಂಧಪಟ್ಟ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಬಂದಲ್ಲಿ, ಸ್ಪೋಟಕ ಕಾಯಿದೆ, ನಿಯಮಾವಳಿಗಳಿಗೆ ಒಳಪಟ್ಟು ಮತ್ತು ಕೋವಿಡ್-19 ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸುವ ಷರತ್ತಿಗೊಳಪಡುವವರಿಗೆ ಮಾತ್ರ ಜಿಲ್ಲಾಧಿಕಾರಿ ಕಚೇರಿಯಿಂದ ಪರವಾನಿಗೆ ಮಂಜೂರು ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು