9:49 PM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಸೂಕ್ತ ಕ್ರಮದೊಂದಿಗೆ ಸಾಂಪ್ರದಾಯಿಕ ಹುಲಿವೇಷ: ಕಾಮತ್

October 12, 2020, 6:41 PM

ಮಂಗಳೂರು(reporterkarnataka news): ನವರಾತ್ರಿ ದಸರಾ ಆಚರಣೆ ಸಂದರ್ಭ ದೇವಸ್ಥಾನದ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಬಾರದಂತೆ ಸೂಕ್ತ ಕ್ರಮ ತೆಗೆದುಕೊಂಡು ಸಂಪ್ರದಾಯ ಪ್ರಕಾರ ಹುಲಿ ವೇಷ ಕುಣಿತಕ್ಕೆ ಈ ಬಾರಿ ಅವಕಾಶ ನೀಡಲು ದ.ಕ ಜಿಲ್ಲಾಡಳಿತ ನಿರ್ಧರಿಸುವ ವಿಶ್ವಾಸವಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಕೊರೊನಾ ಕಾರಣದಿಂದ ದಸರಾ ಸಂದರ್ಭದಲ್ಲಿ ಹುಲಿ ವೇಷ ಕುಣಿತಕ್ಕೆ ದ.ಕ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೆ, ವಿವಿಧ ದೇವಸ್ಥಾನ ಹಾಗೂ ಶಾರದೋತ್ಸವ ಸಮಿತಿಯ ಪ್ರಮುಖರು ಅವಕಾಶ ನೀಡುವಂತೆ ತಮಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು ಎಂದು ಅವರು ಹೇಳಿದ್ದಾರೆ. ಕರಾವಳಿಯ ಮಣ್ಣಿನ ಸಂಸ್ಕೃತಿ ಸಂಸ್ಕಾರ ಹಾಗೂ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಎದುರಾಗಬಾರದು ಎಂಬ ಕಾರಣದಿಂದ ಈಗಾಗಲೇ ಜಿಲ್ಲಾಧಿಕಾರಿಯವರಲ್ಲಿ ಈ ವಿಷಯ ಪ್ರಸ್ತಾಪಿಸಿದ್ದು, ಸಂಪ್ರದಾಯ ಪ್ರಕಾರವಾಗಿ ಹುಲಿ ವೇಷ ಕುಣಿತಕ್ಕೆ ಅವಕಾಶ ನೀಡುವಂತೆ ಕೋರಿದ್ದೇನೆ. ಜತೆಗೆ ಸರಕಾರದ ಉನ್ನತ ಅಧಿಕಾರಿಗಳ ಜತೆಗೂ ಚರ್ಚಿಸಿದ್ದೇನೆ. ದೇವಸ್ಥಾನದ ಉತ್ಸವ ಹಾಗೂ ಶಾರದೋತ್ಸವ ಸಮಿತಿ ಕಾರ್ಯಕ್ರಮದ ವೇಳೆ ಕನಿಷ್ಠ ಸಂಖ್ಯೆಯಲ್ಲಿ ಹುಲಿ ವೇಷ ಕುಣಿತಕ್ಕೆ ಸಂಪ್ರದಾಯ ಪ್ರಕಾರ ಅವಕಾಶ ಕಲ್ಪಿಸುವಂತೆ ಕೋರಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು