ಇತ್ತೀಚಿನ ಸುದ್ದಿ
ಸುಳ್ಯ ಶಾಸಕ ಅಂಗಾರ ಬೆಂಗಳೂರಿಗೆ: ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಬಹುತೇಕ ಖಚಿತ
January 12, 2021, 11:30 PM

ಮಂಗಳೂರು(reporterkarnataka news): ರಾಜ್ಯ ಸಚಿವ ಸಂಪುಟದ ವಿಸ್ತರಣೆ ನಾಳೆ ನಡೆಯಲಿದ್ದು, ಸುಳ್ಯ ಶಾಸಕ ಎಸ್. ಅಂಗಾರ ಅವರಿಗೆ ಸಚಿವ ಸ್ಥಾನ ದೊಕುವುದು ಬಹುತೇಕ ನಿಶ್ಚಿತವಾಗಿರುವುದರಿಂದ ಬೆಂಗಳೂರಿಗೆ ತೆರಳಿದ್ದಾರೆ.
ಮಂಗಳವಾರ ಕಡಬ ವ್ಯಾಪ್ತಿಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಅಂಗಾರ ಅವರು ಮಧ್ಯಾಹ್ನ ವೇಳೆಗೆ ಬೆಂಗಳೂರಿಗೆ ತೆರಳಿದ್ದಾರೆ. ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಕರೆ ಮಾಡಿ ನಾಳೆ ಬೆಂಗಳೂರಿನಲ್ಲಿ ಇರುವಂತೆ ಸೂಚಿಸಿದ್ದಾರೆ ಎಂದು ಅಧಿಕೃತ ಮೂಲಗಳಿಂದ ರಿಪೋರ್ಟರ್ ಕರ್ನಾಟಕಕ್ಕೆ ತಿಳಿದು ಬಂದಿದೆ.