10:11 AM Friday4 - December 2020
ಬ್ರೇಕಿಂಗ್ ನ್ಯೂಸ್
ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ… ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ

ಇತ್ತೀಚಿನ ಸುದ್ದಿ

ಕೊರೊನಾ ನೆಪದಲ್ಲಿ ದೇಶದ ಸಂಪತ್ತು ಲೂಟಿ: ಸುನಿಲ್ ಕುಮಾರ್ ಬಜಾಲ್ ಆಪಾದನೆ

August 26, 2020, 4:33 AM

ಮಂಗಳೂರು(reporterkarnataka news):

ಧೈರ್ಯ ತುಂಬುವ ಮೂಲಕ ಜನತೆಗೆ ಸ್ಪಂದಿಸಬೇಕಾದ ಕೇಂದ್ರ ಸರಕಾರವು ಜನರಲ್ಲಿ ಮೌಢ್ಯವನ್ನು ತುಂಬಿಸಿ ದಾರಿ ತಪ್ಪಿಸಲು 

ಹವಣಿಸುತ್ತಿದೆ ಎಂದು ಸಿಪಿಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.

ಅವರು ಸಿಪಿಎಂ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಉರ್ವಾಸ್ಟೋರಿನಲ್ಲಿ ಜರುಗಿದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕೇಂದ್ರ ಸರಕಾರವು ಇದೇ ಸಂದರ್ಭವನ್ನು ದುರುಪಯೋಗಪಡಿಸಿ ದೇಶದ ಅಮೂಲ್ಯ ಸಂಪತ್ತಾದ ವಿಮಾನ ನಿಲ್ದಾಣ, ರೈಲ್ವೆ, ಬಿಎಸ್ಸೆನ್ನೆಲ್, ಬ್ಯಾಂಕ್, ವಿಮೆ, ಕಲ್ಲಿದ್ದಲು ಮುಂತಾದುವುಗಳನ್ನು ಮಾರಾಟ ಮಾಡಲು ಕುತಂತ್ರ ಹೆಣೆಯಿತು ಎಂದು ಅವರು ಆಪಾದಿಸಿದರು.

ಸಿಪಿಎಂ ನಾಯಕರಾದ ಮನೋಜ್ ಕುಲಾಲ್,

ಸ್ಥಳೀಯ ನಾಯಕರಾದ ಕಿಶೋರ್, ರಾಜೇಶ್ ಕುಲಾಲ್, ರಘುವೀರ್,  ಡಿವೈಎಫ್ ಐ ನಾಯಕರಾದ ಪ್ರಶಾಂತ್ ಎಂ.ಬಿ., ನಾಗೇಂದ್ರ, ಸನತ್, ಸುಕೇಶ್, ಇಕ್ಬಾಲ್, ಸಿಐಟಿಯು

ನಾಯಕರಾದ ಶ್ಯಾಮುವೆಲ್ ಟೈಟಸ್, ದಿನೇಶ್ ಶ್ರೀಯಾನ್, ಮಹಿಳಾ ನಾಯಕರಾದ ಹರಿಣಾಕ್ಷಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು