ಇತ್ತೀಚಿನ ಸುದ್ದಿ
ಸುಪ್ರೀಂ ಕೋರ್ಟ್ ನಲ್ಲಿ ಇಂದು ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ
January 8, 2021, 8:42 AM

ನವದೆಹಲಿ(reporterkarnataka news): ನಟಿ ರಾಗಿಣಿ ದ್ವಿವೇದಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ. ಬೆಳಗ್ಗೆ 11.30ಕ್ಕೆ ಅರ್ಜಿ ವಿಚಾರಣೆ ಗೆ ಬರಲಿದೆ. ಮಾದಕ ದ್ರವ್ಯ ನಂಟಿನ ಆರೋಪಕ್ಕೆ ಸಂಬಂಧಿಸಿದಂತೆ ರಾಗಿಣಿ ಅವರನ್ನು ಬಂಧಿಸಲಾಗಿದೆ.
ರಾಜ್ಯ ಹೈಕೋರ್ಟ್ ರಾಗಿಣಿ ಜಾಮೀನು ಅರ್ಜಿಯನ್ನು ತಳ್ಳಿಹಾಕಿತ್ತು.ಈ ಹಿನ್ನೆಲೆಯಲ್ಲಿ ರಾಗಿಣಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.