8:45 PM Tuesday18 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ತಮಿಳುನಾಡು:10 ರೂ.ಗಳ ನಾಣ್ಯ ಕೊಟ್ಟು 6 ಲಕ್ಷ ಮೌಲ್ಯದ ಕಾರು ಖರೀದಿಸಿದ ಅಂಗಡಿ ಮಾಲೀಕ!

21/06/2022, 17:51

ಚೆನ್ನೈ(reporterkarnataka.com): ಜನರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದರಿಂದ ಬೇಸತ್ತ ತಮಿಳುನಾಡಿನ ವ್ಯಕ್ತಿಯೊಬ್ಬರು 10 ರೂ. ನಾಣ್ಯಗಳನ್ನು ಸಂಗ್ರಹಿಸಿ ಅದರಿಂದಲೇ 6 ಲಕ್ಷ ರೂ.ಮೌಲ್ಯದ ಕಾರು ಖರೀದಿಸಿದ್ದಾರೆ.

ಅರೂರು ನಿವಾಸಿಯಾದ ವೆಟ್ರಿವೇಲ್‌ ಎಂಬವರು ತಾಯಿಯ ಅಂಗಡಿಯನ್ನು ನಡೆಸುತ್ತಿದ್ದರು. ಗ್ರಾಹಕರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ ಅಂಗಡಿಯಲ್ಲಿ 10 ರೂ. ನಾಣ್ಯಗಳು ದೊಡ್ಡ ಮಟ್ಟದಲ್ಲಿ ಸಂಗ್ರಹವಾಗಿದ್ದವು. 10 ರೂ. ನಾಣ್ಯಗಳು ಇನ್ನೂ ಬಳಕೆಗೆ ಯೋಗ್ಯವಾಗಿವೆ ಎಂದು ಅರಿವು ಮೂಡಿಸಲು ಸುಮಾರು 6 ಲಕ್ಷ ರೂ. ಮೌಲ್ಯದ ನಾಣ್ಯಗಳನ್ನು ಸಂಗ್ರಹಿಸಿ ಅದರಿಂದ ವೆಟ್ರಿವೇಲ ಕಾರನ್ನು ಖರೀದಿಸಿದ್ದಾರೆ.

ದೊಡ್ಡ ಚೀಲದಲ್ಲಿ ನಾಣ್ಯಗಳೊಂದಿಗೆ ಧರ್ಮಪುರಿಯ ಕಾರು ಶೋ ರೂಮಿಗೆ ಕಾರು ಖರೀದಿಸಲು ಬಂದಾಗ ಮೊದಲು ಅಲ್ಲಿನ ಸಿಬ್ಬಂದಿಗಳಿಗೆ ಆಶ್ಚರ್ಯವಾಯಿತು. ನಂತರ ವೆಟ್ರಿವೇಲ್‌ ದೃಢ ನಿರ್ಣಯ ನೋಡಿ ಕಾರು ಮಾರಾಟ ಮಾಡಲು ಒಪ್ಪಿಕೊಂಡರು. ಚೀಲಗಟ್ಟಲೆ ನಾಣ್ಯಗಳನ್ನು ಎಣಿಸಿದ ನಂತರ ಕೊನೆಗೂ ಮಾರುತಿ ಸುಜುಕಿ ಇಕೋ ಕಾರನ್ನು ವೆಟ್ರಿವೇಲನಿಗೆ ಹಸ್ತಾಂತರಿಸಲಾಗಿದೆ’ ಎಂದು ಶೋ ರೂಂನವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು