8:01 PM Saturday23 - January 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು

ಇತ್ತೀಚಿನ ಸುದ್ದಿ

ಥಿಯೇಟರ್ ಓಪನ್ ಮಾಡಲು ಅಂಬಾನಿಯ 5ಜಿ ಬಿಡುತ್ತಿಲ್ಲ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಕ್ರೋಶ

January 11, 2021, 12:44 PM

ಬೆಂಗಳೂರು(reporterkarnataka news):

ಈಗ ಎಲ್ಲ ಒಪನ್ ಮಾಡಿದ್ದಾರೆ. ಆದರೆ ಸಿನಿಮಾ ಥಿಯೇಟರ್ ಮಾತ್ರ ತೆರಯುತ್ತಿಲ್ಲ. ಇದಕ್ಕೆ ಅಂಬಾನಿಯ 5ಜಿ ಕಾರಣ ಎನಿಸುತ್ತಿದೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

ತಮ್ಮ ಫೇಸ್​​ಬುಕ್ ಪೇಜ್​ನಲ್ಲಿ ಲೈವ್ ಬಂದು ಮಾತನಾಡುತ್ತಿದ್ದ ಅವರು, ಅಂಬಾನಿ ಅವರು 5ಜಿ ಆರಂಭ ಮಾಡುತ್ತಿದ್ದಾರೆ. ಆದ್ದರಿಂದಲೇ ದೊಡ್ಡ ದೊಡ್ಡವರನ್ನು ಕೂರಿಸಿ ಥಿಯೇಟರ್ ಒಪನ್ ಮಾಡಲು ಅವಕಾಶ ನೀಡ್ತಿಲ್ಲ, ಇದು ಬಹುದೊಡ್ಡ ಹಗರಣ ಎನಿಸುತ್ತಿದೆ ಎಂದು ದರ್ಶನ್ ಆಕ್ರೋಶ ವ್ಯಕ್ತಪಡಿಸಿದರು.

ಅಂಬಾನಿಯವರಿಗೆ ಮೊಬೈಲ್​​​ನಲ್ಲಿ ಸಿನಿಮಾ ನೋಡಿದರೇ ಮಾತ್ರ ವರ್ಕ್​​ಔಟ್ ಆಗುತ್ತೆ. ಅದಕ್ಕಾಗಿ ಈ ರೀತಿ ಮಾಡ್ತಿದ್ದಾರೆ ಅನಿಸುತ್ತಿದೆ. ಯಾವುದೇ ಕಾರಣಕ್ಕೂ ಒಟಿಟಿಗೆ ನಾವು ಕೊಡೋದಿಲ್ಲ. ಈಗ 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶವಿದೆ, ಅದು 25 ಆದರೂ ಥಿಯೇಟರ್​​ನಲ್ಲೇ ನಾವು ಸಿನಿಮಾ ಬಿಡುಗಡೆ ಮಾಡುತ್ತೇವೆ. ಮಾರ್ಚ್​​ 11ಕ್ಕೆ ರಾಬರ್ಟ್​​ ಸಿನಿಮಾ ಬಿಡುಗಡೆ ಆಗುವ ಎಲ್ಲ ಸಾಧ್ಯತೆ ಇದೆ. ತೆಲುಗಿನಲ್ಲೂ ಡಬ್ಬಿಂಗ್ ಕಾರ್ಯ ಮುಗಿದಿದೆ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಮಾರುಕಟ್ಟೆ, ಮದುವೆ ಮಂಟಪ, ಶಾಲೆ ಹಾಗೂ ಕಾಲೇಜುಗಳು ಆರಂಭವಾಗಿದೆ. ಆದರೆ ಚಿತ್ರಮಂದಿರಗಳನ್ನು ತೆರೆಯುತ್ತಿಲ್ಲ. ನಮಗೆ ನೀವು ಸಿನಿಮಾ ಮಂದಿರದಲ್ಲಿ ಬಂದು ನೋಡಿದರೆ ಮಾತ್ರ ತೃಪ್ತಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು