ಇತ್ತೀಚಿನ ಸುದ್ದಿ
ತುಂಬೆ ರೈತರಿಗೆ ನ್ಯಾಯೋಚಿತ ಪರಿಹಾರ: ಶಾಸಕ ವೇದವ್ಯಾಸ ಕಾಮತ್ ಗೆ ಮನವಿ
September 19, 2020, 9:56 PM

ಬಂಟ್ವಾಳ(reporterkarnataka news):
ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರ
ಶಾಸಕ ಡಿ. ವೇದವ್ಯಾಸ ಕಾಮತ್ ಅವರನ್ನು ಭೇಟಿ ಮಾಡಿ ಸಂತ್ರಸ್ತ ರೈತರ ಬಹುಕಾಲಿನ ಜ್ವಲಂತ ಸಮಸ್ಯೆ ಪರಿಹರಿಸುವಂತೆ ಮನವಿ ಸಲ್ಲಿಸಲಾಯಿತು.
ರೈತರಿಗೆ ನ್ಯಾಯೋಚಿತ ಪರಿಹಾರ ದೊರಕಿಸಿಕೊಡುವಲ್ಲಿ ರೈತರ ಹಿತಾಸಕ್ತಿ ಕಾಪಾಡುವುದಾಗಿ ಶಾಸಕರು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ನಿಯೋಗದಲ್ಲಿ ಹೋರಾಟ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಮಂಜನಡ್ಕ ನಿತಿನ್ ಶೆಟ್ಟಿ ಮೊದಲಾದವರಿದ್ದರು.