ಇತ್ತೀಚಿನ ಸುದ್ದಿ
ತಿಮ್ಮಸಂದ್ರದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾ ಭವನ ಉದ್ಘಾಟನೆ
November 4, 2020, 9:26 PM

ಶ್ರೀನಿವಾಸಪುರ(reporterkarnataka news) : ಹಾಲು ಉತ್ಪಾದಕರು ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಉತ್ತಮ ಗುಣಮಟ್ಟದ ಹಾಲು ಸರಬರಾಜು ಮಾಡಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.
ತಾಲ್ಲೂಕಿನ ಜೋಡಿ ತಿಮ್ಮಸಂದ್ರ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾ ಭವನ ಉದ್ಘಾಟಿಸಿ ಮಾತನಾಡಿ, ಜೋಡಿ ತಿಮ್ಮಸಂದ್ರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ ಉತ್ತಮ ಗುನಮಟ್ಟದ ಹಾಲು ಸರಬರಾಜು ಮಾಡುವಲ್ಲಿ ತಾಲ್ಲೂಕಿನಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದರು.
ಕೋಚಿಮುಲ್ ಉಪ ಕಚೇರಿಯ ಉಪ ವ್ಯವಸ್ಥಾಪಕ ಡಾ. ವಿ.ಎನ್.ಶ್ರೀಕಾಂತ್ ಮಾತನಾಡಿ, ತಾಲ್ಲೂಕಿನಾದ್ಯಂತ ಹಸುಗಳಿಗೆ ಕಾಲು ಬಾಯಿ ಜ್ವರದ ವಿರುದ್ಧ ಲಸಿಕೆ ನೀಡುವ ಕಾರ್ಯಕ್ರಮ ಪ್ರಗತಿಯಲ್ಲಿದೆ. ಹಾಲು ಉತ್ಪಾದಕರು ಮೂಢ ನಂಬಿಕೆ ತೊರೆದು, ತಮ್ಮ ಎಲ್ಲ ಹಸುಗಳಿಗೆ ತಪ್ಪದೆ ಲಸಿಕೆ ಕೊಡಿಸಬೇಕು ಎಂದು ಹೇಳಿದರು.
ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಟಿ.ವಿ.ಶ್ರೀನಿವಾಸರೆಡ್ಡಿ, ಶಿಬಿರ ಕಚೇರಿ ಸಹಾಯಕ ವ್ಯವಸ್ಥಾಪಕ ಕೆ.ಎಸ್.ನರಸಿಂಹಯ್ಯ, ವಿಸ್ತರಣಾಧಿಕಾರಿ ಪಿ.ಕೆ.ನರಸಿಂಹರಾಜು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ್ ಇದ್ದರು.