ಇತ್ತೀಚಿನ ಸುದ್ದಿ
ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಯಡಿಯೂರಪ್ಪ
September 24, 2020, 1:56 PM

ತಿರುಪತಿ(reporterkarnataka news): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ತಿರುಪತಿ ತಿರುಮಲದಲ್ಲಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದರು. ಮುಂಜಾನೆ ದೇವಸ್ಥಾನಕ್ಕೆ ಭೇಟಿ ನೀಡಿದ ಯಡಿಯೂರಪ್ಪ ಭಕ್ತಿಯಿಂದ ನಮನ ಸಲ್ಲಿಸಿದರು.
ತಿರುಮಲದಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಭವನ ನಿರ್ಮಿಸಲು ಮುಂದಾಗಿದೆ. ಇದರ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ತಿರುಪತಿಗೆ ಆಗಮಿಸಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಯಡಿಯೂರಪ್ಪ ಅವರಿಗೆ ಸಾಥ್ ನೀಡಿದರು.