8:40 PM Friday26 - February 2021
ಬ್ರೇಕಿಂಗ್ ನ್ಯೂಸ್
ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ… ಮಂಗಳೂರಿನಲ್ಲಿ ಫೆ. 28ರಂದು ಕರಾವಳಿ ಜಾನಪದ ಜಾತ್ರೆ: ಸಚಿವ ಲಿಂಬಾವಳಿ ಉದ್ಘಾಟನೆ ಪಂಚ ರಾಜ್ಯಗಳ ಚುನಾವಣೆ: ಇಂದು ಸಂಜೆ 4.30ಕ್ಕೆ ಘೋಷಣೆ: ಎಲ್ಲೆಲ್ಲಿ ಎಲೆಕ್ಷನ್ ನಡೆಯಲಿ?… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು…

ಇತ್ತೀಚಿನ ಸುದ್ದಿ

ತುಳುವಿಗೆ ರಾಜ್ಯದ ಅಧಿಕೃತ ಭಾಷೆ ಮನ್ನಣೆ: ಮುಖ್ಯಮಂತ್ರಿಗೆ ಕರಾವಳಿ ಶಾಸಕರ ಮನವಿ

August 27, 2020, 2:51 PM

ಮಂಗಳೂರು(reporterkarnataka news):

ತುಳು ಭಾಷೆಗೆ  ರಾಜ್ಯದ ಅಧಿಕೃತ ಭಾಷೆಯಾಗಿ ಮನ್ನಣೆ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರಾವಳಿ ಶಾಸಕರು ಮನವಿ ಸಲ್ಲಿಸಿದ್ದಾರೆ.  ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ.ಭರತ್ ಶೆಟ್ಟಿ, ಸಂಜೀವ ಮಟಂದೂರು, ಪ್ರತಾಪ್ ಸಿಂಹ ನಾಯಕ್ ಹಾಗೂ ಶಾಂತಾರಾಮ‌ ಸಿದ್ದಿ ಅವರು ಉಪಸ್ಥಿತರಿದ್ದರು.  

ನಮ್ಮ ದೇಶದಲ್ಲಿನ ಬಹುತೇಕ ರಾಜ್ಯಗಳಲ್ಲಿ ತಮ್ಮ ತಮ್ಮ ರಾಜ್ಯದಲ್ಲಿನ ಉತ್ತಮ ಸಾಂಸ್ಕೃತಿಕ ಹಿನ್ನೆಲೆಯುಳ್ಳ ಭಾಷೆಗಳನ್ನು ರಾಜ್ಯದ ಅದಿಕೃತ ಭಾಷೆಯನ್ನಾಗಿ ಸಂವಿಧಾನದ ಆರ್ಟಿಕಲ್ 345- ಬಿ ಪ್ರಕಾರ ಘೋಷಿಸಿಕೊಂಡಿದೆ.

ಕಳೆದ 2011ನೇ ಜನಗಣತಿ ಪ್ರಕಾರ ಸುಮಾರು18.05 ಲಕ್ಷ ಜನರು ಅಧಿಕೃತವಾಗಿ ತುಳು ಭಾಷೆಯನ್ನು ಮಾತನಾಡುತ್ತಾರೆ. ಕರ್ನಾಟಕ ತುಳು ಆಕಾಡೆಮಿ ಹಾಗೂ ತುಳು ಸಂಘ ಸಂಸ್ಥೆಗಳ ಪ್ರಕಾರ ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಸುಮಾರು 40 ಲಕ್ಷಕ್ಕೂ ಅಧಿಕ ತುಳು ಭಾಷಿಗರಿದ್ದಾರೆ. ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸುಮಾರು 1.50 ಕೋಟಿಗಿಂತಲೂ ಅಧಿಕ ತುಳು ಭಾಷಿಕರಿರುವುದನ್ನು ಗುರುತಿಸಲಾಗಿದೆ.

ಸಕಾಲದಲ್ಲಿ ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆ ಎಂದು ಸಂವಿಧಾನದ ಆರ್ಟಿಕಲ್ 345 ರ ಪ್ರಕಾರ ಘೋಷಿಸಲು ರಾಜ್ಯ ಸರ್ಕಾರವು ಅನುಸರಿಸಬೇಕಾದ ಮತ್ತು ಈಗಾಗಲೇ ಈ ಕುರಿತಾಗಿ ಕೈಗೊಂಡ ಕ್ರಮಗಳೊಂದಿಗೆ ಸಾಂವಿಧಾನಿಕ ನೀತಿ ನಿಯಮಗಳ ವ್ಯಾಪ್ತಿಯಲ್ಲಿ ಕೇಂದ್ರ ಸರಕಾರ ಅನುಮೋದನೆಯನ್ನು ನೀಡುವಂತೆ ಆಗ್ರಹಿಸುವುದರ ಮೂಲಕ ತುಳುನಾಡಿನ ಸಮಸ್ತರ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಬೇಕೆಂದು ಕರಾವಳಿ ಜಿಲ್ಲೆಯ ಶಾಸಕರು ಮನವಿಯಲ್ಲಿ ಆಗ್ರಹಿಸಿದ್ದಾರೆ. 

ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಈ ಕುರಿತಾದ ಸಾಂವಿಧಾನಿಕ ಕಾನೂನುಗಳ ಪ್ರಕಾರ ಪ್ರಾಸ್ತಾಪನೆಯನ್ನು ಮಂಡಿಸಿ ಅನುಮೋದನೆಯನ್ನು ಪಡೆದು ಕೇಂದ್ರ ಸರಕಾರಕ್ಕೆ ಸಲ್ಲಿಸುವ ಮತ್ತು ಅಲ್ಲಿಂದ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ಕ್ರಮಗಳನ್ನು ಅತ್ಯಗತ್ಯವಾಗಿ ಕೈಗೊಳ್ಳಬೇಕಾಗಿ ಮುಖ್ಯಮಂತ್ರಿಗಳಲ್ಲಿ ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು