7:40 AM Saturday23 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ತುಂಬೆ ನೂತನ ಡ್ಯಾಮ್ ಸಂತ್ರಸ್ತ ರೈತರ ಸಭೆ ನಾಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ

November 24, 2020, 12:08 PM

ಮಂಗಳೂರು(reporterkarnataka news)

ತುಂಬೆ ನೂತನ ಡ್ಯಾಂ ಮುಳುಗಡೆ ಪ್ರದೇಶಕ್ಕೆ ವರತೆ ಪ್ರದೇಶ ಸೇರಿಸಿ ಪರಿಹಾರ ನೀಡುವ ಕುರಿತು ಚರ್ಚಿಸಲು ನವೆಂಬರ್ 25ರಂದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಲಿದೆ.

ಈಗಾಗಲೇ  ನ್ಯಾಯೋಚಿತ ಸೂಕ್ತ ಪರಿಹಾರ ದೊರೆಯದೆ ಇರುವುದರ ಬಗ್ಗೆ ಹಾಗೂ  ಸಂತ್ರಸ್ತರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿರುವ ಬಗ್ಗೆ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., 

ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಗಳು ಹಾಗೂ ಸಂತ್ರಸ್ತ ರೈತರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷ ಎo. ಸುಬ್ರಹ್ಮಣ್ಯ ಭಟ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು