9:58 AM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ಮಾನವನನ್ನು ನಿರ್ನಾಮ ಮಾಡುವ ಶಕ್ತಿ ತ್ಯಾಜ್ಯಕ್ಕಿದೆ

December 2, 2020, 10:33 PM

ಬೆಳ್ತಂಗಡಿ(Reporter Karnataka News)

ತ್ಯಾಜ್ಯಗಳಿಂದ ಅನೇಕ ಸಮಸ್ಯೆಗಳನ್ನು ಮಾನವ ಜನಾಂಗ ತಂದುಕೊಂಡಿದೆ. ಸ್ವಚ್ಛತೆಯ ಕೊರತೆಯಿಂದ ಅನೇಕ ಮಾರಣಾಂತಿಕ ರೋಗಗಳು ಹುಟ್ಟಿಕೊಂಡಿದೆ. ಹಾಗಾಗಿ ಮಾನವನನ್ನು ನಿರ್ನಾಮ ಮಾಡುವ ಶಕ್ತಿ ತ್ಯಾಜ್ಯಕ್ಕಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್ ಮಂಜುನಾಥ್ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸ್ವಚ್ಚತಾ ಜಾಗೃತಿ ವೇದಿಕೆ, ಬೆಳ್ತಂಗಡಿಯ ಮಂಜುನಾಥೇಶ್ವರ ಕಲಾಭವನದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಚತಾ ಸೇನಾನಿಗಳ ಪ್ರೇರಣಾ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಸ್ವಚ್ಚತಾ ಸೇನಾನಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು, ತ್ಯಾಜ್ಯಗಳನ್ನು ಬಳಕೆಯ ವಸ್ತುಗಳಾಗಿ ಪರಿವರ್ತಿಸಿ ಪರ್ಯಾಯ ಉದ್ಯೋಗವಾಗಿಯೂ ರೂಪುಗೊಳಿಸಬಹುದು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿ ಕುಸುಮಾಕರ್ ಪ್ರಕೃತಿದತ್ತವಾಗಿರುವ ಸಂಪನ್ಮೂಲಗಳನ್ನು ವಿಷಯುಕ್ತವಾಗಿ ಮಾಡಿ ಮಾನವ ತನ್ನ ಕಾಲಿಗೆ ತಾನೇ ಕೊಡಲಿಯೇಟು ಹಾಕಿಕೊಂಡಿದ್ದಾನೆ. ಪ್ರಕೃತಿಯ ಹೋರಾಟದ ಪ್ರತಿಫಲದ ಕೂಸು ಕೊರೊನಾ. ಅದನ್ನು ಮಟ್ಟ ಹಾಕಲು ಸ್ವಚ್ಚತೆ ಅತ್ಯಗತ್ಯ ಎಂದರು.

ಗ್ರಾಮಾಭಿವೃದ್ದಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ್ ಸುವರ್ಣ ಮಾತನಾಡಿ ಸ್ವಚ್ಚತೆಯಷ್ಟು ಪವಿತ್ರ ಕೆಲಸ ಬೇರೊಂದಿಲ್ಲ, ಸ್ವಚ್ಚತೆಯೂ ಒಂದು ಪೂಜೆ. ಎಲ್ಲಿ ಸ್ವಚ್ಚತೆ ನೆಲೆಸಿರುತ್ತದೋ ಅಲ್ಲಿ ಸಾನಿಧ್ಯ ನೆಲೆಸಿರುತ್ತದೆ ಎಂದರು.

ಸ್ವಚ್ಚತಾ ಸೇನಾನಿಗಳ ಮೂಲಕ ತಾಲೂಕಿನ ವಿವಿಧ ಭಾಗಗಳ ತ್ಯಾಜ್ಯ ವಿಲೇವಾರಿ ಸಮಸ್ಯೆಗಳನ್ನು ಆಲಿಸಲಾಯಿತು ಮತ್ತು ಸಲಹೆಗಳನ್ನು ಪಡೆಯಲಾಯಿತು.

ವೇದಿಕೆಯಲ್ಲಿ ಸ್ವಚ್ಚ ಭಾರತ್ ಮಿಷನ್ ಜಿಲ್ಲಾ ಸಂಯೋಜಕಿ ಮಂಜುಳಾ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ನಿರ್ದೇಶಕ ವಿವೇಕ್ ವಿನ್ಸಂಟ್ ಪಾಯಸ್, ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಶುದ್ದಗಂಗಾ ಘಟಕ ಯೋಜನಾಧಿಕಾರಿ ಲಕ್ಷ್ಮಣ್, ತಾಲೂಕು ಯೋಜನಾಧಿಕಾರಿ ಜಯಕರ್ ಶೆಟ್ಟಿ, ಯಶವಂತ್ ತಾಲೂಕಿನ ಸ್ವಚ್ಚತಾ ಸೇನಾನಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು