ಇತ್ತೀಚಿನ ಸುದ್ದಿ
ಉಚಿತ ಕೊರೊನಾ ಲಸಿಕೆ: ಕೇಂದ್ರ ಸರಕಾರ ಯು ಟರ್ನ್, ಉಚಿತ ಎಂದು ಆರೋಗ್ಯ ಸಚಿವಾಲಯ ಹೇಳಿಲ್ಲವಂತೆ !
December 2, 2020, 7:41 PM

ನವದೆಹಲಿ(reporterkarnataka news): ಬಿಹಾರ ಚುನಾವಣೆಯ ವೇಳೆ ಅಲ್ಲಿನ ಬಿಜೆಪಿ ನಾಯಕರು ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಚುನಾವಣೆ ಭರವಸೆ ನೀಡಿದ್ದರು. ನಂತರದ ದಿನಗಳಲ್ಲಿ ಇಡೀ ದೇಶಕ್ಕೆ ಕೊರೊನಾ ಲಸಿಕೆ ಉಚಿತವಾಗಿ ನೀಡುವುದಾಗಿ ಕಮಲ ಪಕ್ಷದ ನಾಯಕರು ಸಾರ್ವಜನಿಕವಾಗಿ ಹೇಳಿಕೊಂಡಿದ್ದರು. ಆದರೆ ಇದೀಗ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ “ನಾವು ಹೀಗೆ ಹೇಳಿಯೇ ಇಲ್ಲ” ಎಂದು ಹೇಳಿಕೆ ನೀಡುವ ಮೂಲಕ ಕೇಂದ್ರ ಸರಕಾರ ಯು ಟರ್ನ್ ಹೊಡೆದಿದೆ.
ಬಿಹಾರ ವಿದಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಬಿಡುಗಡೆಗೊಳಿಸಿದ ಚುನಾವಣಾ ಪ್ರಣಾಳಿಕೆಯಲ್ಲಿ ಉಚಿತ ಕೊವಿಡ್ ಲಸಿಕೆ ಸೇರಿದ್ದರೂ ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯ ನಾವು ಹೀಗೆ ಹೇಳಿಯೇ ಇಲ್ಲ, ಬೇಕಾಬಿಟ್ಟಿಯಾಗಿ ಮಾತನಾಡುವುದು ಬಿಟ್ಟು ಮಾಹಿತಿಗಳನ್ನಾಧರಿಸಿ ಚರ್ಚಿಸಬೇಕು ಎಂದು ಹೇಳಿದೆ.
ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್, “ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಅಂತಹ ವೈಜ್ಞಾನಿಕ ವಿಚಾರಗಳನ್ನು ವಾಸ್ತವ ಮಾಹಿತಿಗಳನ್ನಾಧರಿಸಿ ಚರ್ಚಿಸಬೇಕೆ ಹೊರತು ಒಟ್ಟಾರೆಯಾಗಿ ಮಾತನಾಡಬಾರದು’ ಎಂದು ಹೇಳಿಕೆ ನೀಡಿದ್ದಾರೆ.