ಇತ್ತೀಚಿನ ಸುದ್ದಿ
ಅನ್ನಭಾಗ್ಯದ ಅಕ್ಕಿ ಅನ್ಯರ ಪಾಲು: ಎಚ್ಚೆತ್ತ ಜಿಲ್ಲಾಧಿಕಾರಿಯಿಂದ ಸಕಾಲಿಕ ಕಾರ್ಯಾಚರಣೆ
November 2, 2020, 7:44 PM

ಉಡುಪಿ(reporter Karnataka news): ಬಡವರ ಎರಡು ಹೊತ್ತಿನ ತುತ್ತಿಗಾಗಿ ಸಿದ್ದರಾಮಯ್ಯ ಸರಕಾರ ಜಾರಿಗೆ ತಂದ ಅನ್ನಭಾಗ್ಯ ಯೋಜನೆಯ ಅಕ್ಕಿ ಕಂಡವರ ಪಾಲಾಗುತ್ತಿದೆ. ಉಡುಪಿ ಜಿಲ್ಲೆಯ ಶಿರಿಯಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಮರ್ಗಿ ಎಂಬಲ್ಲಿನ ರೈಸ್ ಮಿಲ್ ಮೇಲೆ ದಾಳಿ ನಡೆಸಿದ ಜಿಲ್ಲಾಧಿಕಾರಿ ನೇತೃತ್ವದ ತಂಡ ಬರೋಬ್ಬರಿ 600 ಕ್ವಿಂಟಾಲ್ ಗೂ ಅಧಿಕ ಅಕ್ಕಿಯನ್ನು ವಶಪಡಿಸಿಕೊಂಡಿದೆ.
ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ ಈ ಹಿಂದೆಯೂ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆದಿದೆ. ಆದರೆ ಕೊರೊನೊತ್ತರದಲ್ಲಿ ನಡೆದ ಬಹುದೊಡ್ಡ ಕಾರ್ಯಾಚರಣೆ ಇದಾಗಿದೆ. ಒಟ್ಟು 16.5 ಲಕ್ಷ ರೂ. ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. 6 ಲಾರಿ, ಎರಡು 407, ಒಂದು ಟಾಟಾ 909 ಹಾಗೂ ಮಾರುತಿ ಇಕೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಮೂವರು ಚಾಲಕರು ಹಾಗೂ ಒಬ್ಬ ಕ್ಲಿನರ್ ನ ವಶಕ್ಕೆ ತೆಗೆದುಕೊಳ್ಳಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಜಿಲ್ಲಾಧಿಕಾರಿ ತಂಡ ಈ ದಾಳಿ ನಡೆಸಿದೆ.