8:25 AM Wednesday20 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ…

ಇತ್ತೀಚಿನ ಸುದ್ದಿ

ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್

November 28, 2020, 6:04 AM

ಮಂಗಳೂರು(reporterkarnataka news): ನಗರದ ಬಿಜೈ ಸಮೀಪದ ಅಪಾರ್ಟ್‌ಮೆಂಟ್‌ವೊಂದರ ಗೋಡೆ ಮೇಲೆ ಮಂಗಳೂರಿಗೆ ಉಗ್ರರನ್ನು ಕರೆಸುವ ಕುರಿತು ಬೆದರಿಕೆಯ ಬರಹದ ಬಗ್ಗೆ

ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ವೀಕ್ಷಿಸಲಾಗುವುದು ಎಂದು 

ಮಂಗಳೂರು ಪೊಲೀಸ್ ಕಮಿಷನರ್

ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ಹೇಳಿದ್ದಾರೆ.

ಕಂಪೌಂಡ್ ಮೇಲೆ ‘ಲಷ್ಕರ್ ಇ ತೊಯ್ಬ ಝಿಂದಾಬಾದ್’ ಎಂದು ಬರೆಯಲಾಗಿದ್ದು, ಉಗ್ರರನ್ನು ಮಂಗಳೂರಿಗೆ ಕರೆಸುವ ಬೆದರಿಕೆ ಹಾಕಲಾಗಿದೆ. ಸಂಘ ಪರಿವಾರಕ್ಕೆ ಬೆದರಿಕೆಯ ಮಾತುಗಳನ್ನು ಬರೆಯಲಾಗಿದೆ. ‘ನಿಮ್ಮನ್ನು (ಸಂಘ ಪರಿವಾರ) ನಿಯಂತ್ರಿಸಲು ಲಷ್ಕರ್ ಉಗ್ರರನ್ನು ಆಹ್ವಾನಿಸಬೇಕಾದೀತು. ಉಗ್ರರನ್ನು ಆಹ್ವಾನಿಸುವಂತೆ ಮಾಡಬೇಡಿ’ ಎಂದು ಆಂಗ್ಲ ಭಾಷೆಯಲ್ಲಿ ಕಪ್ಪು ಮಸಿಯಲ್ಲಿ ಬರೆಯಲಾಗಿದೆ.

ಪೊಲೀಸರು ವಿವಾದಾತ್ಮಕ ಬರಹದ ಮೇಲೆ ಪೈಂಟ್ ಬಳಿದು ಜನತೆಯ ಆತಂಕ ಕಡಿಮೆ ಮಾಡುವ ಪ್ರಯತ್ನ ಮಾಡಿದ್ದಾರೆ. ಈ ಕುರಿತು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಘಟನೆ ನಡೆದ ಸಮೀಪ ರಸ್ತೆಯ ಸುತ್ತಮುತ್ತ ಸಿ.ಸಿ. ಕ್ಯಾಮೆರಾಗಳಿದ್ದು, ಅದರಲ್ಲಿ ಘಟನೆಯ ದೃಶ್ಯಾವಳಿ ದಾಖಲಾಗಿರುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವಿಕಾಶ್ ಕುಮಾರ್ ತಿಳಿಸಿದ್ದಾರೆ.

ಗುರುವಾರ ತಡರಾತ್ರಿ ದುಷ್ಕರ್ಮಿಗಳು ಇದು ಬರೆದಿರುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು