1:38 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಅಪಾಯದ ಮಟ್ಟ ಮೀರಿದ ನೇತ್ರಾವತಿ, ಕುಮಾರಧಾರಾ, ಸ್ವರ್ಣ: ಡ್ಯಾಮ್ ಗಳು ಭರ್ತಿ

August 9, 2020, 9:42 AM

ಮಂಗಳೂರು(reporterkarnataka news):

ಕಳೆದ ನಾಲ್ಕೈದು ದಿನಗಳಿಂದ ಕರಾವಳಿ ಹಾಗೂ ಘಟ್ಟಪ್ರದೇಶದಲ್ಲಿ ಬಿರುಸಿನ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಗ್ಗು ಪ್ರದೇಶಗಳೆಲ್ಲ ಜಲಾವೃತವಾಗಿದೆ. ಕೃಷಿ ಭೂಮಿಗೆ ನೀರು ನುಗ್ಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನೇತ್ರಾವತಿ ಹಾಗೂ ಉಪ್ಪಿನಂಗಡಿಯಲ್ಲಿ ಕುಮಾರಧಾರಾ,ಉಡುಪಿ ಜಿಲ್ಲೆಯಲ್ಲಿ ಸ್ವರ್ಣ , ವಾರಾಹಿ, ಸೀತಾ, ಚಕ್ರಾ, ಕುಬ್ಜ ಹಾಗೂ ಶಾಂಭವಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೇತ್ರಾವತಿ ನದಿ ನೀರಿನ ಮಟ್ಟ ಭಾನುವಾರ ಬೆಳಗ್ಗೆ 7 ಮೀಟರ್ ಗೆ ತಲುಪಿದೆ.

ಬಂಟ್ವಾಳ ಕೆಳಗಿನ ಪೇಟೆ, ಬಡಡ್ಕ, ಪಾಣೆಮಂಗಳೂರು, ಆಲಡ್ಕ, ನಂದಾವರ, ಬೋಗೋಡಿ, ಗೂಡಿನಬಳಿ, ಬಸ್ತಿಪಡ್ಪು, ಬಿ.ಸಿ.ರೋಡ್ ತಲಪಾಡಿ, ಪೊನ್ನೋಡಿ, ತುಂಬೆ, ವಳವೂರು, ಪಿಸು, ನಾವೂರು, ಅಜಿಲಮೊಗರು ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ. ಪಾಣೆಮಂಗಳೂರು ಆಲಡ್ಕ ಸಮೀಪ ಮನೆಗಳಿಗೆ ನೀರು ತುಂಬಿದೆ. ಅಜಿಲಮೊಗರು ಜುಮ್ಮಾ ಮಸೀದಿ ಸಭಾಂಗಣಕ್ಕೆ ನೀರು ಬಂದಿದೆ. ನಂದಾವರ ಸೇತುವೆ ಮುಳುಗಿದೆ. ಶಂಭೂರು ಎಎಂ ಆರ್ ಡ್ಯಾಮ್ ತುಂಬಿದೆ. ಡ್ಯಾಮ್ ನ 14 ಗೇಟುಗಳನ್ನು ತೆರೆದು ನೀರು ಹೊರಗೆ ಬಿಡಲಾಗುತ್ತಿದೆ. ಸೈರನ್ ಮೊಳಗಿಸಿ ನದಿ ತಟದ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗುತ್ತಿದೆ. ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ  7.8 ಮೀಟರ್ ಎತ್ತರಕ್ಕೆ ನೀರು ಹರಿದಿದೆ. ಡ್ಯಾಮ್ ನ ಎಲ್ಲ 30 ಗೇಟುಗಳನ್ನು ತೆರೆಯಲಾಗಿದೆ.

ಮಂಗಳೂರು ತಾಲೂಕಿನಾದ್ಯಂತ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸ್ಥಳೀಯ ನದಿಗಳು ಉಕ್ಕಿ ಹರಿಯುತ್ತಿದೆ. ಅನೇಕ ಗ್ರಾಮಗಳು ನೆರೆ ಹಾವಳಿಗೆ ತತ್ತರಿಸಿವೆ. ಫಲ್ಗುಣಿ ನದಿಯ ಮರವೂರು ಡ್ಯಾಂ ಉಕ್ಕಿ ಹರಿಯುತ್ತಿದ್ದು ಸುತ್ತಮುತ್ತಲಿನ ಗ್ರಾಮ ಹಾಗೂ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ತೆಂಗು ಕಂಗು ಸೇರಿದಂತೆ ಕೃಷಿಭೂಮಿಗಳಿಗೆ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ. ಸ್ಥಳೀಯರು ತಮ್ಮ ಮನೆಗಳಿಂದ ಸುರಕ್ಷಿತ ತಾಣಗಳಿಗೆ ತೆರಳುತ್ತಿದ್ದಾರೆ. ಜಾನುವಾರುಗಳನ್ನು ನಿತ್ಯೋಪಯೋಗಿ ವಸ್ತುಗಳನ್ನು ದೋಣಿಯ ಮೂಲಕ ಬೇರೆಡೆಗೆ ಸಾಗಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು