ಇತ್ತೀಚಿನ ಸುದ್ದಿ
ಸಂಸದ ಉಮೇಶ್ ಜಾಧವ್ ಗೆ ಕೊರೊನಾ ಸೋಂಕು, ಬೆಂಗಳೂರು ಆಸ್ಪತ್ರೆಗೆ ದಾಖಲು
August 20, 2020, 4:34 AM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೋನಾ ರಾಜಕಾರಣಿಗಳ ಮೇಲೆ ದಾಳಿ ಮುಂದುವರಿಸಿದೆ. ಕಲಬುರ್ಗಿ ಸಂಸದ ಉಮೇಶ್ ಜಾಧವ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪ಼ಡೆಯುತ್ತಿದ್ದಾರೆ. ಅವರ ಪುತ್ರ ಹಾಗೂ ಶಾಸಕ ಅವಿನಾಶ್ ಜಾಧವ್ ಕೂಡ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಈ ಹಿಂದೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಕೂಡ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಇದೀಗ ಅವರು ಗುಣಮುಖರಾಗಿದ್ದು, ಸಾರ್ವಜನಿಕ ಜೀವನಕ್ಕೆ ಮರಳಿದ್ದಾರೆ.