ಇತ್ತೀಚಿನ ಸುದ್ದಿ
ಉತ್ತರ ಕರ್ನಾಟಕದಲ್ಲಿ ಪ್ರವಾಹ: ಹಲವು ಗ್ರಾಮಗಳು ಜಲಾವೃತ, ಎಲ್ಲೆಡೆ ಭೀತಿ
August 17, 2020, 4:08 AM

ಬೆಳಗಾವಿ(reporterkarnataka news): ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಘಟ ಪ್ರಭಾ, ಮಲ ಪ್ರಭಾ ಮತ್ತು ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಅಪಾಯದ ಮಟ್ಟ ತಲುಪಿದೆ.
ಬೆಳಗಾವಿಯ ಚಿಕ್ಕೋಡಿ, ಕಾಗವಾಡ ಮತ್ತು ರಾಯಭಾಗ, ಅಥಣಿ ಮತ್ತು ರಾಮ ದುರ್ಗದ ಹಲವು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇದೇ ವೇಳೆ ಬಸವ ಸಾಗರ ಡ್ಯಾಂ ನಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ರಾಯಚೂರಿನ ಹಲವು ಗ್ರಾಮಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಬಾದಾಮಿಯ 34 ಗ್ರಾಮಗಳಲ್ಲಿ ಕೂಡ ಪ್ರವಾಹ ಭೀತಿ ಎದುರಾಗಿದೆ.