ಇತ್ತೀಚಿನ ಸುದ್ದಿ
ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿಯಲ್ಲಿ ಯಥಾಸ್ಥಿತಿ
August 19, 2020, 2:53 AM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಪ್ರವಾಹ ಸ್ಥಿತಿ ಮುಂದುವರಿದಿದೆ. ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಮಹಾರಾಷ್ಟ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ರಾಜ್ಯಕ್ಕೆ ನೀರು ಹರಿದು ಬರುತ್ತಿದೆ. ಇದರಿಂದ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ.
ಕೃಷ್ಣಾ, ಘಟ ಪ್ರಭಾ ಮತ್ತು ಮಲ ಪ್ರಭಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಮಳೆಯ ಜತೆಗೆ ಸಾಂಕ್ರಾಮಿಕ ರೋಗದ ಭೀತಿ ಕೂಡ ಎದುರಾಗಿದೆ. ಪ್ರವಾಹದಿಂದಾಗಿ ಸಾವಿರಾರು ಎಕರೆ ಕೃಷಿ ಭೂಮಿ ನೀರಿನಲ್ಲಿ ಮುಳುಗಿದೆ.