ಇತ್ತೀಚಿನ ಸುದ್ದಿ
ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್ ತೀರ್ಪು
November 24, 2020, 9:34 AM

ನವದೆಹಲಿ(reporterkarnataka news): ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಕುರಿತಂತೆ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಲಿದೆ.
ಬಿಎಸ್ಎಫ್ ನಿಂದ ವಜಾಗೊಂಡಿದ್ದ ಕಾನ್ ಸ್ಟೇಬಲ್ ಈ ಸಂಬಂಧ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಅಧಿಕಾರಿಗಳು ಉದ್ದೇಶಪೂರ್ಪಕವಾಗಿ ತಮ್ಮ ನಾಮಪತ್ರ ಅರ್ಜಿ ತಳ್ಳಿಹಾಕಿದ್ದಾರೆ ಎಂದು ಅವರು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.