12:33 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ವೈಕುಂಠ ಏಕಾದಶಿ: ನಂಜನಗೂಡು ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ವೈಭವ; ಸಾವಿರಾರು ಭಕ್ತರಿಂದ ದೇವರ ದರ್ಶನ

23/12/2023, 19:26

ಮೋಹನ್ ನಂಜನಗೂಡು ಮೈಸೂರು

info.reporterarnataka@gmail.com

ನಂಜನಗೂಡು ತಾಲೂಕು ಹುಲ್ಲಹಳ್ಳಿಯ ಸದ್ಗುರು ಶ್ರೀ ಮಹದೇವ ತಾತ ಬಡಾವಣೆಯಲ್ಲಿ ವಿಜಯಲಕ್ಷ್ಮಿ ನಾರಾಯಣ ರೆಡ್ಡಿ ದಂಪತಿ ನಿರ್ಮಿಸಿರುವ ನೂತನ ದೇವಾಲಯ ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯದ ವತಿಯಿಂದ ನಿನ್ನೆ ರಾತ್ರಿಯಿಂದಲೇ ಹೋಮ ಹವನ ವಿಶೇಷ ಪೂಜೆಗಳು ನಡೆದು ಇಂದು ಬೆಳಗ್ಗೆ ಎಂಟು ಗಂಟೆಯಿಂದ ಭಕ್ತರಿಗೆ ವೈಕುಂಠ ಮಹಾದ್ವಾರ ಹಾಗೂ ಪುಣ್ಯ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.
ಹುಲ್ಲಹಳ್ಳಿಯು ಸೇರಿದಂತೆ ಸುತ್ತಮುತ್ತಲ ಸಾವಿರಾರು ಭಕ್ತರು ದೇವಾಲಯಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತು ಶ್ರೀ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ತಮ್ಮ ಭಕ್ತಿ ಭಾವ ಮೆರೆದರು.
ಇಂದು ವಿಷ್ಣುವಿಗೆ ಪ್ರಿಯವಾದ ದಿನವಾದ್ದರಿಂದ ದೇವಾಲಯದ ವೈಕುಂಠ ದ್ವಾರದ ಮೂಲಕ ಬಂದು ದೇವರ ದರ್ಶನ ಪಡೆದರೆ ಪುಣ್ಯಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿಂದ ಸಾವಿರಾರು ಭಕ್ತರು ಬೆಳಿಗ್ಗೆಯಿಂದ ಸಂಜೆವರೆಗೂ ವೈಕುಂಠ ದ್ವಾರ ಪ್ರವೇಶಿಸಿ ಬಂದು ಶ್ರೀ ಅಲಮೇಲಮ್ಮ ಹಾಗೂ ಶ್ರೀ ವೆಂಕಟೇಶ್ವರಸ್ವಾಮಿ, ಗಣಪತಿ ಹಾಗೂ ಆಂಜನೇಯ ಸ್ವಾಮಿಯ ದರ್ಶನ ಪಡೆದು ಪುಳಕಿತರಾದರು. ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯ ಹಾಗೂ ಶ್ರೀ ವೆಂಕಟೇಶ್ವರ ಸ್ವಾಮಿ ಮತ್ತು ಅಲಮೇಲ ಮಂಗಮ್ಮನವರ ಮೂರ್ತಿಗಳನ್ನು ವಿಶೇಷವಾಗಿ ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.


ಇದೇ ಸಂದರ್ಭ ದೇವಾಲಯಕ್ಕೆ ಬಂದ ಎಲ್ಲಾ ಭಕ್ತರಿಗೆ ಅನ್ನ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ದೇವಾಲಯದ ಟ್ರಸ್ಟಿ ಶ್ರೀನಿವಾಸ ರೆಡ್ಡಿ ಮಾತನಾಡಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ವೈಕುಂಠ ಏಕಾದಶಿ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು