ಇತ್ತೀಚಿನ ಸುದ್ದಿ
ವರ್ಷದ ಕೊನೆಯ ದಿನ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಸಾಧ್ಯತೆ
December 28, 2020, 9:29 AM

ಬೆಂಗಳೂರು(reporterkarnataka news): ರಾಜ್ಯದ ಕೆಲವೆಡೆ ವರ್ಷದ ಕೊನೆಯ ದಿನವಾದ
ಡಿಸೆಂಬರ್ 31ರಂದು ಸಾಧಾರಣ ಮಳೆಯಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ , ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಸಾಧಾರಣ ಮಳೆಯಾಗಲಿದೆ.
ರಾಜ್ಯದ ಹಲವೆಡೆ 2.5 ಮಿ.ಮೀನಿಂದ 64.4 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಆಕಾಶ ಶುಭ್ರವಾಗಿದೆ. 29 ಡಿಗ್ರಿ ಗರಿಷ್ಠ ಉಷ್ಣಾಂಶ, 15 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.