ಇತ್ತೀಚಿನ ಸುದ್ದಿ
ವಾಯುಭಾರ ಕುಸಿತ: ಜ.7ರಿಂದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಸಾಧ್ಯತೆ
January 4, 2021, 4:35 PM

ವಾಯುಭಾರ ಕುಸಿತ: ಜ.7ರಿಂದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ಮಂಗಳೂರು(reporterkarnataka news): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರಾವಳಿ ಸೇರಿದಂತೆ ಜನವರಿ 7ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲುದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.