6:15 PM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರಿ ಮಳೆ; ಇಬ್ಬರ ಸಾವು, ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

20/03/2022, 15:19

ಬೆಂಗಳೂರು(reporterkarnataka.com):  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರವಾಗಿ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಕೆಲವೆಡೆ ಆಲಿಕಲ್ಲು ಸಮೇತ ಮಳೆ ಸುರಿದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಹನಸೋಗೆ ಗ್ರಾಮದ ರೈತ ಸಿದ್ದಲಿಂಗನಾಯಕ (72) ಅವರು ಜಮೀನಿನ ಬಳಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರದ ರೆಂಬೆ ಬಿದ್ದು ಮಲ್ಲಮ್ಮ (53) ಅಸುನೀಗಿದ್ದಾರೆ.

ವಿವಿಧ ಗ್ರಾಮಗಳಲ್ಲಿ ಮನೆಗಳ ಚಾವಣಿ, ಹೆಂಚುಗಳು ಹಾನಿಗೊಂಡಿವೆ. ವಿದ್ಯುತ್‌ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಹೊಳೆನರಸೀಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಸಿಡಿಲು ಬಡಿದು ಟ್ರಾಕ್ಟರ್ ಮಂಜು ಅವರ ಎತ್ತು ಮೃತಪಟ್ಟಿದೆ. ಉತ್ತರ ಕರ್ನಾಟಕದ ಕೆಲವೆಡೆಯೂ ಗುಡುಗು, ಸಿಡಿಲಿನಿಂದ ಮಳೆ ಸುರಿದಿದೆ.

ಹಾವೇರಿ ಜಿಲ್ಲೆಯ ಅರಳೇಶ್ವರ ಗ್ರಾಮ ಸೇರಿದಂತೆ ಕೆಲವೆಡೆ ಭಾರೀ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದು ಜನರು ಸಂತಸಗೊಂಡಿದ್ದಾರೆ.

ಶಿರಸಿಯಲ್ಲೂ ಸುರಿದ ಭಾರೀ ಮಳೆ ಗಾಳಿಗೆ ಮಾರಿಕಾಂಬ ಗದ್ದುಗೆಯ ಚಪ್ಪರ ಕುಸಿತಗೊಂಡಿದೆ. ಜಾತ್ರಾ ಪೇಟೆಯ ಅಂಗಡಿಗಳಲ್ಲಿ ಮಾರಾಟಕ್ಕಿಟ್ಟ ಆಟಿಗೆ ವಸ್ತುಗೆಳೆಲ್ಲಾ ಹಾಳಾಗಿ, ವ್ಯಾಪಾರಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಗಾಳಿ-ಮಳೆಗೆ ಕಬ್ಬಿಣದ ಶೀಟ್​ಗಳು ಹಾರಿ ಹೋಗಿವೆ. ಶೃಂಗೇರಿ, ಕಳಸ ತಾಲೂಕಿನಲ್ಲಿ ಧಾರಾಕಾರ ಮಳೆ ಆಗಿದ್ದು, ವರ್ಷದ ಮೊದಲ ಮಳೆಯ ಅಬ್ಬರ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ. ಕೊಡಗಿನ ಸುತ್ತಮುತ್ತ ಭಾರೀ ಮಳೆ ಸುರಿದಿದೆ. ಸುಂಟಿಕೊಪ್ಪ ನಾಪೋಕ್ಲು ವಿರಾಜಪೇಟೆಯಲ್ಲಿ ವರುಣನ ಆರ್ಭಟಕ್ಕೆ ಜನರು ತತ್ತರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು