11:19 PM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರಿ ಮಳೆ; ಇಬ್ಬರ ಸಾವು, ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

20/03/2022, 15:19

ಬೆಂಗಳೂರು(reporterkarnataka.com):  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರವಾಗಿ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಕೆಲವೆಡೆ ಆಲಿಕಲ್ಲು ಸಮೇತ ಮಳೆ ಸುರಿದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಹನಸೋಗೆ ಗ್ರಾಮದ ರೈತ ಸಿದ್ದಲಿಂಗನಾಯಕ (72) ಅವರು ಜಮೀನಿನ ಬಳಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರದ ರೆಂಬೆ ಬಿದ್ದು ಮಲ್ಲಮ್ಮ (53) ಅಸುನೀಗಿದ್ದಾರೆ.

ವಿವಿಧ ಗ್ರಾಮಗಳಲ್ಲಿ ಮನೆಗಳ ಚಾವಣಿ, ಹೆಂಚುಗಳು ಹಾನಿಗೊಂಡಿವೆ. ವಿದ್ಯುತ್‌ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಹೊಳೆನರಸೀಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಸಿಡಿಲು ಬಡಿದು ಟ್ರಾಕ್ಟರ್ ಮಂಜು ಅವರ ಎತ್ತು ಮೃತಪಟ್ಟಿದೆ. ಉತ್ತರ ಕರ್ನಾಟಕದ ಕೆಲವೆಡೆಯೂ ಗುಡುಗು, ಸಿಡಿಲಿನಿಂದ ಮಳೆ ಸುರಿದಿದೆ.

ಹಾವೇರಿ ಜಿಲ್ಲೆಯ ಅರಳೇಶ್ವರ ಗ್ರಾಮ ಸೇರಿದಂತೆ ಕೆಲವೆಡೆ ಭಾರೀ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದು ಜನರು ಸಂತಸಗೊಂಡಿದ್ದಾರೆ.

ಶಿರಸಿಯಲ್ಲೂ ಸುರಿದ ಭಾರೀ ಮಳೆ ಗಾಳಿಗೆ ಮಾರಿಕಾಂಬ ಗದ್ದುಗೆಯ ಚಪ್ಪರ ಕುಸಿತಗೊಂಡಿದೆ. ಜಾತ್ರಾ ಪೇಟೆಯ ಅಂಗಡಿಗಳಲ್ಲಿ ಮಾರಾಟಕ್ಕಿಟ್ಟ ಆಟಿಗೆ ವಸ್ತುಗೆಳೆಲ್ಲಾ ಹಾಳಾಗಿ, ವ್ಯಾಪಾರಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಗಾಳಿ-ಮಳೆಗೆ ಕಬ್ಬಿಣದ ಶೀಟ್​ಗಳು ಹಾರಿ ಹೋಗಿವೆ. ಶೃಂಗೇರಿ, ಕಳಸ ತಾಲೂಕಿನಲ್ಲಿ ಧಾರಾಕಾರ ಮಳೆ ಆಗಿದ್ದು, ವರ್ಷದ ಮೊದಲ ಮಳೆಯ ಅಬ್ಬರ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ. ಕೊಡಗಿನ ಸುತ್ತಮುತ್ತ ಭಾರೀ ಮಳೆ ಸುರಿದಿದೆ. ಸುಂಟಿಕೊಪ್ಪ ನಾಪೋಕ್ಲು ವಿರಾಜಪೇಟೆಯಲ್ಲಿ ವರುಣನ ಆರ್ಭಟಕ್ಕೆ ಜನರು ತತ್ತರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು