9:22 PM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ವೀರು ಟಾಕೀಸ್ ಲಾಂಛನದಲ್ಲಿ ಮಗನೇ ಮಹಿಷ ತುಳು ಚಿತ್ರಕ್ಕೆ ಮುಹೂರ್ತ

October 31, 2020, 5:27 PM

ಮಂಗಳೂರು(reporterkarnataka news):

ವೀರು ಟಾಕೀಸ್ ಲಾಂಛನದಲ್ಲಿ ಚಾಲಿಪೋಲಿಲು ಖ್ಯಾತಿಯ ನಿರ್ದೇಶಕ ವೀರೇಂದ್ರ ಶೆಟ್ಟಿ ನಿರ್ದೇಶನ-ನಿರ್ಮಾಣದಲ್ಲಿ ತಯಾರಾಗುತ್ತಿರುವ ಮಗನೇ ಮಹಿಷ ತುಳು ಚಲನಚಿತ್ರದ ಮುಹೂರ್ತ ಸಮಾರಂಭ ಇಂದು ಬೆಳಿಗ್ಗೆ ಕಾವೂರು ಗಾಂಧಿನಗರದ ಅಭಿಮಾನ್ ಲೇಯೌಟ್ ನಲ್ಲಿ ಜರುಗಿತು. 

ನಗರದ ಹಿರಿಯ ವೈದ್ಯರಾದ ರಾಮಚಂದ್ರ ರಾವ್ ಕ್ಯಾಮರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ನಟ ಭೋಜರಾಜ್ ವಾಮಂಜೂರ್, ವೆಂಕಟೇಶ್ ಕಾಮತ್, ಚಿತ್ರದ ಕ್ಯಾಮರಾ ಮ್ಯಾನ್ ಮಹಿ ಬ್ರಹ್ಮ ರೆಡ್ಡಿ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ನಿರ್ಮಾಪಕ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಉಪಸ್ಥಿತರಿದ್ದರು. ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಹಾಸ್ಯ ಪ್ರಧಾನ ಕಥಾ ಹಂದರವಿರುವ ಮಗನೇ ಮಹಿಷ ಚಿತ್ರಕ್ಕೆ ಮಂಗಳೂರು, ಸುರತ್ಕಲ್, ಪಕ್ಷಿಕೆರೆ ಭಾಗದಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು